ಕೆಆರ್‌ಎಸ್‌ ಡ್ಯಾಂನಿಂದ ಇಂದು ಕಾವೇರಿ ನದಿ ಹಾಗೂ ನಾಲೆಗಳಿಗೆ ನೀರು ಬಿಡುಗಡೆ

Prasthutha|

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ‌ಕೆಆರ್​ಎಸ್ ಜಲಾಶಯದಿಂದ ನದಿ ಹಾಗೂ ನಾಲೆಗಳಿಗೆ ನೀರು ಬಿಡಲು ತೀರ್ಮಾನಿಸಿದ್ದು, ಇಂದು ಬೆಳಗ್ಗೆ ನೀರು ಹರಿಸುವುದಾಗಿ ಕಾವೇರಿ ನೀರಾವರಿ ನಿಗಮದಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

- Advertisement -

ಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಕೆರೆ ಕಟ್ಟೆಗಳನ್ನು ತುಂಬಿಸಲು ನಾಲೆ ಹಾಗೂ ನದಿಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.

ಮೈಸೂರು, ಮಂಡ್ಯ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ನದಿ ಹಾಗೂ ನಾಲೆಗಳಿಗೆ ನೀರು ಹರಿಸಲು ಕಾವೇರಿ ನೀರಾವರಿ ನಿಗಮ ಮುಂದಾಗಿದೆ. ಜಲಾಶಯದಲ್ಲಿ ನೀರಿನ ಸಂಗ್ರಹಣೆ ಶೇ 32.10 ರಷ್ಟು ಇದೆ. ಹೊಸದಾಗಿ ಯಾವುದೇ ಬೆಳೆಗಳನ್ನು ಹಾಕದಂತೆ ರೈತರಿಗೆ ಮನವಿ ಮಾಡಲಾಗಿದೆ.

- Advertisement -

ಮಳೆ ಬಾರದೇ ಇದ್ದರೆ ಹತ್ತು ದಿನಗಳ ಕಾಲ‌ ನೀರು ಹರಿಸಲು ತೀರ್ಮಾನಿಸಿದ್ದು, ಸದ್ಯ ಜಲಾಶಯದಲ್ಲಿ 90.80 ಅಡಿ ನೀರು ಸಂಗ್ರಹವಾಗಿದೆ. ಜಲಾಶಯದ ಸಾಮಾರ್ಥ್ಯ 124.62 ಅಡಿ. ಜಲಾಶಯಕ್ಕೆ 4336 ಕ್ಯೂಸೆಸ್ ನೀರು ಒಳ ಹರಿವಿದೆ.

Join Whatsapp