Home ಟಾಪ್ ಸುದ್ದಿಗಳು ವಯನಾಡ್ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡ್ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕಿಳಿಯಲಿದ್ದಾರೆ.

ಪ್ರಿಯಾಂಕಾ ಗಾಂಧಿ ಉಮೇದುವಾರಿಕೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ವಯನಾಡಿನ ಜನರು ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದಾರೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಗಿಂತ ಉತ್ತಮ ಪ್ರತಿನಿಧಿಯನ್ನು ನಾನು ಊಹಿಸಲು ಸಾಧ್ಯವಿಲ್ಲ. ವಯನಾಡಿನ ಅಗತ್ಯತೆಗಳು ಮತ್ತು ಸಂಸತ್ತಿನಲ್ಲಿ ಪ್ರಬಲ ಧ್ವನಿಯಾಗಲಿದ್ದು, ಚಾಂಪಿಯನ್ ಆಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು. ನಾಮಪತ್ರದ ಬಳಿಕ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಪ್ರಿಯಾಂಕಾ ಗಾಂಧಿ ಬೃಹತ್ ರೋಡ್ ಶೋ ನಡೆಸಿದರು.

Join Whatsapp
Exit mobile version