ರಾಂಚಿ: ಜಾರ್ಖಂಡ್ ನ ಸೆರೈಕೆಲಾ– ಖಾರ್ಸಾ ವಾನ್ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಮುಂಜಾನೆ ಮುಂಬೈ–ಹೌರಾ ರೈಲಿನ 18 ಬೋಗಿಗಳು ಹಳಿತಪ್ಪಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗ್ನೇಯ ರೈಲ್ವೆಯ ಚಕ್ರಧರಪುರ ವಿಭಾಗದ ಜಮ್ ಶೆಡ್ ಪುರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬರಬಂಬೂ ಬಳಿ ಮುಂಜಾನೆ 3.45 ಗಂಟೆಗೆ ಈ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ’ ಎಂದು ಆಗ್ನೇಯ ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.