ವಯನಾಡು ದುರಂತ: ಜನರ ಗಮನ ಸೆಳೆದ ಜಿಲ್ಲಾಧಿಕಾರಿ, ಕನ್ನಡತಿ ಡಿ. ಆರ್. ಮೇಘಶ್ರೀ

Prasthutha|

ಚಿತ್ರದುರ್ಗ: ವಯನಾಡಿನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 300ರ ಗಡಿ ದಾಟಿದೆ. ರಕ್ಷಣಾ ಕಾರ್ಯ ಇನ್ನೂ ನಡೆಯುತ್ತಿದೆ.

- Advertisement -


ಈ ದುರಂತದ ಬಳಿಕ ವಯನಾಡು ಜಿಲ್ಲಾಡಳಿತ ಜನ ಜೀವನ ಸಹಜ ಸ್ಥಿತಿಗೆ ತರಲು ಹಗಲಿರುಳು ಕೆಲಸ ಮಾಡುತ್ತಿದೆ. ಇಂತಹ ಸಮಯದಲ್ಲಿ ಜಿಲ್ಲಾಧಿಕಾರಿ, ಕನ್ನಡತಿ ತಮ್ಮ ಕೆಲಸದ ಮೂಲಕ ಜನರ ಗಮನ ಸೆಳೆದಿದ್ದಾರೆ. ವಯನಾಡು ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿರುವುದು ಡಿ. ಆರ್. ಮೇಘಶ್ರೀ. ಕರ್ನಾಟಕದ ಕೋಟೆನಾಡು ಚಿತ್ರದುರ್ಗದವರು. ಇಂತಹ ಸಮಯದಲ್ಲಿ ಪ್ರತಿ ನಿಮಿಷದ ಕೆಲಸವೂ ಸಹ ಅತಿ ಮುಖ್ಯ ಎಂದು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.


ಜಿಲ್ಲಾಧಿಕಾರಿ ಡಿ. ಆರ್. ಮೇಘಶ್ರೀ ದುರಂತ ನಡೆದ ಬಳಿಕ ಮುಂಜಾನೆ 3 ಗಂಟೆಯಿಂದ ಕೆಲಸ ಮಾಡುತ್ತಿದ್ದಾರೆ. ಜುಲೈ 10ರಂದು ಮೇಘಶ್ರೀ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿಯಾಗಿ ಆಗಮಿಸಿದ ಕೆಲವೇ ದಿನಗಳಲ್ಲಿ ಅವರು ಅತಿ ದೊಡ್ಡ ಸವಾಲು ಎದುರಿಸಿದ್ದಾರೆ.

- Advertisement -

ಮೇಘಶ್ರೀ ಅವರ ತಂದೆ ರುದ್ರಮುನಿ ಎಸ್ಬಿಐನಲ್ಲಿ ಮುಖ್ಯ ವ್ಯವಸ್ಥಾಪಕರಾಗಿ ನಿವೃತ್ತರಾದವರು. ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದವರು. “ಸೋಮವಾರದವರೆಗೂ ನಾನು ವಯನಾಡಿನಲ್ಲಿದ್ದೆ. ಆ ಮಧ್ಯಾಹ್ನ ವಯನಾಡನ್ನು ಬಿಟ್ಟು ಬೆಂಗಳೂರಿಗೆ ಬಂದಿದ್ದೆ. ಘಟನೆ ಮಧ್ಯರಾತ್ರಿ ನಡೆದಿದೆ. ಕೆಲವೇ ಗಂಟೆಗಳಲ್ಲಿ ಮೇಘಶ್ರೀ ಸ್ಥಳಕ್ಕೆ ಧಾವಿಸಿದ್ದಳು. ಈ ತುರ್ತು ಪರಿಸ್ಥಿತಿಯ ಸಮಯದಲ್ಲಿ, ನನ್ನ ಮಗಳು ವಯನಾಡಿನ ಜನರನ್ನು ರಕ್ಷಿಸುವ ಅತ್ಯಂತ ಕಷ್ಟಕರವಾದ ಕೆಲಸವನ್ನು ಮಾಡುತ್ತಿರುವುದು ನನಗೆ ಅತ್ಯಂತ ಹೆಮ್ಮೆ ತಂದಿದೆ” ಎಂದು ತಂದೆ ಹೇಳಿದ್ದಾರೆ.



Join Whatsapp