ಮಸೀದಿಗಳ ಮೈಕ್ ತೆಗೆಸದಿದ್ದರೆ, ನಾವೂ ಬೆಳಗ್ಗೆ ಮಂದಿರಗಳಲ್ಲಿ ಭಜನೆ ಹಾಕಿಸುತ್ತೇವೆ: ಮುತಾಲಿಕ್

Prasthutha|

ಧಾರವಾಡ: ಮಸೀದಿಯ ಮೈಕ್ ತೆಗೆಯದಿದ್ದರೆ ನಾವೂ ಬೆಳಗ್ಗೆ 5ಕ್ಕೆ ಮಂದಿರಗಳಲ್ಲಿ ಈಶ್ವರನ ಭಜನೆ, ಓಂಕಾರ ಹಾಕಿಸುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

- Advertisement -

ಬೆಳಗ್ಗೆ 5 ಗಂಟೆಗೆ ಲೌಡ್ ಸ್ಪೀಕರ್ ಹಾಕುವುದನ್ನು ತಡೆಯಲು ನಮ್ಮ ಸಂಘಟನೆ ಮೊದಲು ತಹಸೀಲ್ದಾರರಿಗೆ ಮನವಿ ಮಾಡಿದ್ದೆವು. ಆದರೆ ಎಲ್ಲಿಯೂ ತಹಸೀಲ್ದಾರರು ಕ್ರಮ ಕೈಗೊಳ್ಳಲಿಲ್ಲ. ಧ್ವನಿ ಮಾಲಿನ್ಯ ಆಗುತ್ತಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಗೂ ಮನವಿ ಮಾಡಿದ್ದೆವು. ಆದರೂ ಪ್ರಯೋಜನವಾಗಲಿಲ್ಲ. ಇದೀಗ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ. ಕೊನೆಯ ಎಚ್ಚರಿಕೆಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.

Join Whatsapp