ಈಶಾನ್ಯ ಭಾರತದ ಪುಟ್ಟ ರಾಜ್ಯ ಮಿಜೋರಾಂ ವಿಧಾನಸಭೆಗೆ ನಡೆದ ಚುನಾವಣೆಯ ಮತಎಣಿಕೆ ಪ್ರಾರಂಭವಾಗಿದ್ದು, ಆಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್), ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ (ಜೆಡ್ಪಿಎಂ) ಮತ್ತು ಕಾಂಗ್ರೆಸ್ ನಡುವೆ ನಡುವೆ ಪೈಪೋಟಿ ಏರ್ಪಟ್ಟಿದೆ.
ಈ ಬಗ್ಗೆ ಮಾತನಾಡಿದ ಜೋರಾಮ್ ಪೀಪಲ್ಸ್ ಮೂವ್ಮೆಂಟ್ ನ (ಝಡ್ಪಿಎಂ) ಅಧ್ಯಕ್ಷ ಮತ್ತು ಸೆರ್ಚಿಪ್ ಕ್ಷೇತ್ರದ ಅಭ್ಯರ್ಥಿ ಲಾಲ್ದುಹೋಮ ಅವರು ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸುವ ಕುರಿತು ಮಾತನಾಡಿದ್ದಾರೆ. “ನಾವು ಸರ್ಕಾರ ರಚಿಸುವ ವಿಶ್ವಾಸ ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಎಕ್ಸಿಟ್ ಪೋಲ್ ಕೂಡಾ ವಿಶ್ವಾಸಾರ್ಹವಾಗಿವೆ. ಎಲ್ಲಾ ಎಕ್ಸಿಟ್ ಪೋಲ್ ಫಲಿತಾಂಶಗಳು ನಮ್ಮತ್ತ ಬೊಟ್ಟು ಮಾಡಿವೆ” ಎಂದರು.