ಬೆಂಗಳೂರು: ನಟ ದರ್ಶನ್ ಬಂಧನದ ಕುರಿತಂತೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಪ್ರತಿಕ್ರಿಯಿಸಿದ್ದು, ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಫೇಸ್ಬುಕ್ ನಲ್ಲಿ ಬರೆದುಕೊಂಡಿರುವ ಅವರು, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯದ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ ಎಂದಿದ್ದಾರೆ.
ಅಲ್ಲದೆ, ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂದು ಹೇಳಿದ್ದಾರೆ.