Home ಟಾಪ್ ಸುದ್ದಿಗಳು ಒಡಿಶಾ ಸರ್ಕಾರದ ಜೊತೆ ನಾವು ಸಂಪರ್ಕದಲ್ಲಿದ್ದೇವೆ: ಸಿದ್ದರಾಮಯ್ಯ

ಒಡಿಶಾ ಸರ್ಕಾರದ ಜೊತೆ ನಾವು ಸಂಪರ್ಕದಲ್ಲಿದ್ದೇವೆ: ಸಿದ್ದರಾಮಯ್ಯ

ಬೆಂಗಳೂರು: ಒಡಿಶಾ ಸರ್ಕಾರದ ಜೊತೆ ನಾವು ಸಂಪರ್ಕದಲ್ಲಿ ಇದ್ದೇವೆ. ಕರ್ನಾಟಕದ ಬಗ್ಗೆ ಮಾಹಿತಿ ಕೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಕಳಿಸಿದ್ದೇನೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಯಾವತ್ತೂ ಆಗಿರಲಿಲ್ಲ. ದೊಡ್ಡ ಪ್ರಮಾಣದ ಅಪಘಾತ. ಕರ್ನಾಟಕದವರ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಸಂತೋಷ್ ಲಾಡ್ 3 ಗಂಟೆ ಫ್ಲೈಟ್ ಗೆ ಹೋಗಿದ್ದಾರೆ ಎಂದರು.


ಕೇಂದ್ರ ರೈಲ್ವೆ ಇಲಾಖೆ ಮತ್ತು ಒಡಿಶಾ ಸರ್ಕಾರದ ಜೊತೆ ಸಂಪರ್ಕದಲ್ಲಿ ಇದ್ದೇವೆ. ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

Join Whatsapp
Exit mobile version