ಕುಮಾರಸ್ವಾಮಿ ಮಾಡಿದ ಅಧ್ವಾನದ ಫಲ ಅನುಭವಿಸುತ್ತಿದ್ದೇವೆ: ಶಾಸಕ ಸಿ.ಪಿ.ಯೋಗೇಶ್ವರ್ ವಾಗ್ದಾಳಿ

- Advertisement -

- Advertisement -

ಚನ್ನಪಟ್ಟಣ: ತಾಲೂಕಿನ ಹಲವು ಭಾಗದಲ್ಲಿ ಕೆಲ ಕೆರೆಗಳಲ್ಲಿ ನೀರು ಭರ್ತಿಯಾಗಿಲ್ಲ. ಹಲವು ಕೆರೆಗಳಲ್ಲಿ ನೀರಿಲ್ಲ. ಕಳೆದ ಆರೇಳು ವರ್ಷಗಳ ಕಾಲ ಕ್ಷೇತ್ರದ ಶಾಸಕರಾಗಿದ್ದ ಕುಮಾರಸ್ವಾಮಿ ಮಾಡಿದ ಅಧ್ವಾನದ ಫಲ ಅನುಭವಿಸುತ್ತಿದ್ದೇವೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದರು.

ತಾಲೂಕಿನ ಮಾಕಳಿ ಗ್ರಾಪಂ ವ್ಯಾಪ್ತಿಯ ಕೆರೆಗಳಿಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಸಾಕಷ್ಟು ಶ್ರಮ ವಹಿಸಿ ತಾಲೂಕಿನಲ್ಲಿ ನೀರಾವರಿ ಯೋಜನೆಗಳನ್ನು ಜಾರಿಗೆ ತಂದೆ. ದುರದೃಷ್ಟವಶಾತ್ ನಾನು ಸೋತೆ. ಆ ವೇಳೆ ಇಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾಕಷ್ಟು ಲೋಪದೋಷ ಆಗಿದೆ.

- Advertisement -

ಕೆಲವೆಡೆ ಪೈಪ್‌ಲೈನ್ ಕಾಮಗಾರಿ ಕಳಪೆಯಾಗಿದೆ. ಲೋಪದೋಷ ಇದ್ದರೂ ಸಹ ಕೆರೆಗಳಿಗೆ ನೀರು ಹರಿಯುತ್ತಿದೆ. ಕೆರೆಗಳಿಗೆ ನೀರು ಬಂದರೂ ಸಹ ನೀರು ನಿಲ್ಲುತ್ತಿಲ್ಲ. ಕೆಲವೆಡೆ ಏರಿಗಳು ಒಡೆದಿದ್ದು, ಅದನ್ನು ಸರಿಪಡಿಸಬೇಕಿದೆ. ಈ ಭಾಗದ ಆರೇಳು ಕೆರೆಗಳ ತೂಬು, ಕಾಲುವೆಗಳನ್ನು ದುರಸ್ತಿಪಡಿಸುವ ನಿಟ್ಟಿನಲ್ಲಿ ನೀರಾವರಿ ಸಚಿವರಿಗೆ ಮನವಿ ಸಲ್ಲಿಸಿದ್ದೇನೆ ಎಂದರು. ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸತ್ತೆಗಾಲ ಯೋಜನೆ ಕಾರ್ಯಗತವಾಗಿದ್ದು, ಅದರಿಂದ ಇಗ್ಗಲೂರು ಕೆರೆಗೆ ನಿರಂತರ ನೀರು ಹರಿಯಲಿದೆ. ಯೋಜನೆ ಪೂರ್ಣಗೊಂಡರೆ ಕಾವೇರಿ ಹರಿಯುವಾಗಲೆಲ್ಲ ನಮಗೂ ನೀರು ಹರಿಯಲಿದೆ. ನನ್ನ ಅವಧಿಯಲ್ಲಿ ನೀರಿನ ಸಮಸ್ಯೆ ಇರಲಿಲ್ಲ. ಎಲ್ಲ ಕೆರೆಕಟ್ಟೆಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದೆ ಎಂದರು.

- Advertisement -


Must Read

Related Articles