ಕಾಂಗ್ರೆಸ್ ನಿರ್ನಾಮ ಮಾಡಲು ಒಂದಾಗಿದ್ದೇವೆ: ಕೆ.ಎಸ್.ಈಶ್ವರಪ್ಪ

Prasthutha|

ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಿರ್ನಾಮ ಮಾಡುವ ದೃಷ್ಟಿಯಿಂದ ಒಂದಾಗಿದ್ದೇವೆ ಎಂದು ಹೇಳಿದ್ದಾರೆ.

- Advertisement -


ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ಈ ಬಾರಿ 28 ಸ್ಥಾನವನ್ನೂ ಗೆಲ್ಲುತ್ತೇವೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಗೆದ್ದಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ ಎಂದರು.


ಲೋಕಸಭಾ ಚುನಾವಣಾ ದೃಷ್ಟಿಯಿಂದ ಹೊಂದಾಣಿಕೆ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿಸುವ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಕಾಂಗ್ರೆಸ್ ನಿರ್ನಾಮ ಮಾಡುವ ದೃಷ್ಟಿಯಿಂದ ಒಂದಾಗಿದ್ದೇವೆ. ದೇಶವನ್ನು ಉಳಿಸುವ ಸಲುವಾಗಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಲಾಗುತ್ತಿದೆ ಎಂದರು

Join Whatsapp