Home ಟಾಪ್ ಸುದ್ದಿಗಳು ನಂಬಿಸಿ ಕೈಬಿಟ್ಟ ಯಡಿಯೂರಪ್ಪ ಮೇಲೆ ನಮಗೆ ಬೇಸರವಿದೆ: ಜೆಸಿ ಮಾಧುಸ್ವಾಮಿ

ನಂಬಿಸಿ ಕೈಬಿಟ್ಟ ಯಡಿಯೂರಪ್ಪ ಮೇಲೆ ನಮಗೆ ಬೇಸರವಿದೆ: ಜೆಸಿ ಮಾಧುಸ್ವಾಮಿ

ಬೆಂಗಳೂರು: ತುಮಕೂರು ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಮಾಧುಸ್ವಾಮಿ ಅವರು, ಯಡಿಯೂರಪ್ಪ ವಿರುದ್ಧ ಮಾಧುಸ್ವಾಮಿ ಕೆಂಡಾಮಂಡಲರಾಗಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮನೆಯಲ್ಲಿ ಕುಳಿತಿದ್ದವರನ್ನ ಚುನಾವಣೆಗೆ ರೆಡಿ ಆಗಿ ಎಂದರು. ಈಗ ನಡು ನೀರಿನಲ್ಲಿ ಕೈ ಬಿಟ್ಟಿದ್ದಾರೆ. ನಂಬಿಸಿ ಕೈಬಿಟ್ಟ ಯಡಿಯೂರಪ್ಪ ಮೇಲೆ ನಮಗೆ ಬೇಸರವಿದೆ ಎಂದು ಹೇಳಿದರು.

ಯಡಿಯೂರಪ್ಪ ಅವರಿಗೆ ಬೇಕಾದ ಎರಡು–ಮೂರು ಕ್ಷೇತ್ರಗಳನ್ನು ಹಠ ಮಾಡಿ ತೆಗೆದುಕೊಂಡಿದ್ದಾರೆ. ನನಗೆ ಯಾಕೆ ಟಿಕೆಟ್ ಕೊಡಿಸಲಿಲ್ಲ. ಸೋಮಣ್ಣ ರಾಜ್ಯಸಭೆ ಟಿಕೆಟ್ ಗಾಗಿ ನವದೆಹಲಿ ತನಕ ಹೋಗಿ ಬಂದರು. ಅಲ್ಲಿ ಟಿಕೆಟ್ ಕೈ ತಪ್ಪಿದರೆ ಇಲ್ಲಿ ಕೊಡಬಹುದಾ? ಅವರೇನು ಈ ಕ್ಷೇತ್ರದ ಸಂಬಂಧಿಕರಾ, ನೆಂಟರಾ?’ ಎಂದು ಪ್ರಶ್ನಿಸಿದರು.

Join Whatsapp
Exit mobile version