ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಮರಿಗೆ ಸ್ಪರ್ಧಿಸಲು ಮೂರು ಕ್ಷೇತ್ರಗಳನ್ನು ನೀಡಬೇಕೆಂದು ಹೈಕಮಾಂಡ್‌ಗೆ ಕೇಳಿದ್ದೇವೆ ಎಂದು ವಸತಿ ಸಚಿವ ಝಮೀರ ಅಹ್ಮದ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಝಮೀರ್, ಬೆಂಗಳೂರು ಸೆಂಟ್ರಲ್, ಹಾವೇರಿ ಹಾಗೂ ಬೀದರ್ ಲೋಕಸಭಾ ಕ್ಷೇತ್ರಗಳನ್ನು ಕೇಳಿದ್ದೇವೆ. ಈ ಬೇಡಿಕೆಯನ್ನು ಪಕ್ಷದ ಹೈಕಮಾಂಡ್ ಮುಂದೆ ಇಟ್ಟಿದ್ದೇವೆ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ನೋಡೋಣ ಎಂದರು.