Home ಟಾಪ್ ಸುದ್ದಿಗಳು ಪಿಎಸ್ಸೈ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಎಲ್ಲ ದೂರುಗಳನ್ನೂ ಪರಿಗಣಿಸುತ್ತೇವೆ: ಸಿ ಎಂ ಬೊಮ್ಮಾಯಿ

ಪಿಎಸ್ಸೈ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಎಲ್ಲ ದೂರುಗಳನ್ನೂ ಪರಿಗಣಿಸುತ್ತೇವೆ: ಸಿ ಎಂ ಬೊಮ್ಮಾಯಿ

ಬೆಂಗಳೂರು: ಪಿಎಸ್ಸೈ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಎಲ್ಲ ದೂರುಗಳನ್ನೂ ಪರಿಗಣಿಸುತ್ತೇವೆ. ದಾಖಲೆಗಳನ್ನು ಪರಿಶೀಲಿಸಿ ತನಿಖೆ ಮಾಡುತ್ತೇವೆ. ಮುಕ್ತವಾದ, ನಿಷ್ಪಕ್ಷಪಾತವಾದ, ನಿಷ್ಠುರವಾದ ತನಿಖೆ ಆಗಬೇಕು ಎನ್ನುವುದು ಸರ್ಕಾರ ನಿಲುವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪಿಎಸ್ಸೈ ನೇಮಕಾತಿ ಹಗರಣದಲ್ಲಿ ‘ದಿವ್ಯಾ ಹಾಗರಗಿಯಷ್ಟೆ ಅಲ್ಲ. ಇನ್ನೂ ಹಲವರು ಈ ಪ್ರಕರಣದಲ್ಲಿ ಇದ್ದಾರೆ. ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರ ಬಗ್ಗೆ ಕಾಂಗ್ರೆಸ್ನವರು ಆಧಾರರಹಿತವಾದ ಆರೋಪ ಮಾಡುತ್ತಿದ್ದಾರೆ. ಆರೋಪ ಮಾಡುವಾಗ ಸಣ್ಣ ಸಾಕ್ಷ್ಯವಾದರೂ ಬೇಕು. ಆದರೆ, ಜವಾಬ್ದಾರಿಯುತ ಪಕ್ಷವಾದ ಕಾಂಗ್ರೆಸ್ ಹಿಟ್ ಆ್ಯಂಡ್ ರನ್ ಮಾಡಲು ಹೊರಟಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅವಧಿಯಲ್ಲಿ ಹಲವು ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಆ ಸಂದರ್ಭದಲ್ಲಿ ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈಗ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಅವರ ಪಕ್ಷದ ಕೆಲವರ ಬಂಧನ ಆಗಿದೆ. ಎಲ್ಲಿ ಅವರ ಬಣ್ಣ ಬಯಲಾಗುತ್ತದೊ ಎಂದು ಹೆದರಿ ಸಾಕ್ಷ್ಯಾಧಾರಗಳಿಲ್ಲದೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

Join Whatsapp
Exit mobile version