Home ಟಾಪ್ ಸುದ್ದಿಗಳು ನಮ್ಮ ಬಳಿ ನೀರಿಲ್ಲ, ಬಿಡುವುದೂ ಇಲ್ಲ: ಡಿ.ಕೆ.ಶಿವಕುಮಾರ್

ನಮ್ಮ ಬಳಿ ನೀರಿಲ್ಲ, ಬಿಡುವುದೂ ಇಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ತಮಿಳುನಾಡು ಕೇಳಿದಷ್ಟು ನೀರು ಬಿಡಲು ಆಗುವುದಿಲ್ಲ, ನಾವು ಬಿಡುವುದೂ ಇಲ್ಲ. ನಮ್ಮ ಬಳಿ ಅಷ್ಟು ನೀರಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.


ಸದಾಶಿವ ನಗರದ ನಿವಾಸದ ಬಳಿ ಇಂದು ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆಯುತ್ತಿದೆ. ತಮಿಳುನಾಡಿನವರು 12,500 ಕ್ಯೂಸೆಕ್ ನೀರಿಗೆ ಬೇಡಿಕೆ ಇಟ್ಟಿದ್ದಾರೆ. ಪ್ರಸ್ತುತ 5 ಸಾವಿರ ಕ್ಯೂಸೆಕ್ ನೀರು ಬಿಡಲೂ ಆಗದ ಸ್ಥಿತಿಯಲ್ಲಿ ನಾವಿದ್ದೇವೆ. ಪ್ರತಿದಿನ ಎಷ್ಟು ನೀರು ಬರುತ್ತಿದೆ ಮತ್ತು ಹೊರ ಹೋಗುತ್ತಿದೆ ಎನ್ನುವ ಮಾಹಿತಿಯನ್ನು ಮುಚ್ಚಿಡಲು ಸಾಧ್ಯವಿಲ್ಲ. ಬಿಳಿಗುಂಡ್ಲು ಜಲಾಶಯದಲ್ಲಿ ಪ್ರತಿಕ್ಷಣವೂ ಅದು ದಾಖಲಾಗುತ್ತದೆ. ಇದನ್ನು ಎರಡೂ ರಾಜ್ಯಗಳ ಅಧಿಕಾರಿಗಳು ಗಮನಿಸುತ್ತಿರುತ್ತಾರೆ. ಅದರ ಮೇಲ್ವಿಚಾರಣೆ ರಾಜ್ಯದ ಬಳಿ ಇಲ್ಲ. ಕಾವೇರಿ ನೀರು ನಿರ್ವಹಣಾ ಸಮಿತಿಯ ಬಳಿ ಇದೆ. ಆದ ಕಾರಣ ನೀರಿನ ಹರಿವಿನ ವಿಚಾರದಲ್ಲಿ ನಾನಾಗಲಿ, ಅವರಾಗಲಿ ಸುಳ್ಳು ಹೇಳಲು ಸಾಧ್ಯವಿಲ್ಲ ಎಂದರು.

Join Whatsapp
Exit mobile version