ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟವನ್ನು ನಾವು ಕೂಡ ಮಾಡಿದ್ದೇವೆ, ಅಮುಲ್ ವಿಚಾರದಲ್ಲಿ ರಾಜಕಾರಣ ಸಲ್ಲದು: ಬೊಮ್ಮಾಯಿ

Prasthutha|

ನವದೆಹಲಿ : ನಂದಿನಿ ನಂಬರ್ ಒನ್ ಬ್ರ್ಯಾಂಡ್ ಆಗಲಿದ್ದು, ಅಮುಲ್ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ನಂದಿನಿ ಮಾರಾಟವನ್ನು ನಾವು ಕೂಡ ಮಾಡಿದ್ದೇವೆ. ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಅಮುಲ್ ಹಿಮ್ಮೆಟ್ಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.


ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಎಲ್ಲಾ ಅಭ್ಯರ್ಥಿಗಳ ವಿಚಾರ ಚರ್ಚೆ ಮಾಡಲಾಗುವುದು. ನಾಳೆ ಸಂಜೆ ಐದು ಗಂಟೆಗೆ ಸಂಸದಿಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲಾ 224 ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದರು.



Join Whatsapp