Home ಟಾಪ್ ಸುದ್ದಿಗಳು ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ: ಸಿದ್ದರಾಮಯ್ಯ

ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ: ಸಿದ್ದರಾಮಯ್ಯ

ನವದೆಹಲಿ: ಕಾವೇರಿ ನದಿಯಿಂದ ಹದಿನೈದು ದಿನಗಳ ಕಾಲ ನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು CWMA (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಆದೇಶ ನೀಡಿದ್ದು, ಈ ಆದೇಶಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ಸರ್ವ ಪಕ್ಷ ಸಂಸದರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಯುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು. ಮಳೆಯ ಕೊರತೆ ಅವಧಿಯಲ್ಲಿ ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಈ ಸಂಕಷ್ಟ ಹೆಚ್ಚಲು ಕಾರಣವಾಗಿದೆ. ಕೇಂದ್ರ ಜಲ ಸಂಪನ್ಮೂಲ ಸಚಿವರ ಜತೆ ಸಂಜೆ ಸಭೆ ನಡೆಸುತ್ತಿದ್ದೇವೆ. ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ವ್ಯಾಪ್ತಿ ಪ್ರಧಾನಿಯವರಿಗೆ ಇದೆ. ಹೀಗಾಗಿ ನಾವು ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

Join Whatsapp
Exit mobile version