ಬೆಂಗಳೂರು: ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ, ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ ಎಂದು ಸಂಸದ ಡಿ.ಕೆ. ಸುರೇಶ್ ತಿರುಗೇಟು ನೀಡಿದರು.
ಕಾಂಗ್ರೆಸ್ಸಿನಂತೆ ಬಿಜೆಪಿಯವರು ಕುತ್ತಿಗೆ ಕೊಯ್ಯುವ ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸುರೇಶ್, ಜೆಡಿಎಸ್ ನವರನ್ನು ಈ ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ ಮಾಡಿದ್ದೇವೆ. ಈ ದೇಶ ಗುರುತಿಸುವಂತಹ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಕಾಂಗ್ರೆಸ್ ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ರಾಜ್ಯದ ಮೂವತ್ತು ಸಿಎಂಗಳಲ್ಲಿ ಕುಮಾರಸ್ವಾಮಿ ಅವರು ಒಬ್ಬರಾಗುತ್ತಿರಲಿಲ್ಲ ಎಂದು ತಿರುಗೇಟು ನೀಡಿದರು.