ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ

- Advertisement -

ಚಿಕ್ಕಬಳ್ಳಾಪುರ: “ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಂಪೂರ್ಣ 5 ವರ್ಷ ನಾನೇ ಸಿಎಂ ಆಗಿರ್ತೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಐತಿಹಾಸಿಕ ನಂದಿಗಿರಿಧಾಮದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲ್ಲಿದ್ದು, ಇದಕ್ಕೂ ಮುನ್ನ ಸಿದ್ದರಾಮಯ್ಯ ಮತ್ತು ಸಚಿವ ಸಂಪುಟದ ಸದಸ್ಯರು ಭೋಗ ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ, ಸೆಪ್ಟೆಂಬರ್​ನಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿಗರ ಮಾತುಗಳಿಗೆ ಉತ್ತರಿಸುತ್ತಾ, “ಬಿಜೆಪಿಯವರು ಶುದ್ಧ ಸುಳ್ಳು ಹೇಳುತ್ತಾರೆ. ನಾನು ಈಗಾಗಲೇ ಮೈಸೂರಿನಲ್ಲಿ ಹೇಳಿದ್ದೇನೆ. ನಮ್ಮ ಸರ್ಕಾರ ಬಂಡೆಯಂತೆ ದೃಢವಾಗಿ ಇರಲಿದೆ. ನಾವೆಲ್ಲರೂ ಒಗ್ಗಟ್ಟಿನಲ್ಲಿ ಇದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಅವರು ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಅವರ ಸೇವೆ ಏನೆಂಬುದನ್ನು ಅವರೇ ತಿಳಿಸಲಿ. ಮೊದಲು ಬಿಜೆಪಿಯವರು ಹಗಲು ಕನಸು ಕಾಣುವುದನ್ನು ಬಿಡಲಿ” ಎಂದರು.

- Advertisement -

“ರಾಜ್ಯದ ಪ್ರತೀ ಡಿವಿಷನ್​ಗಳಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತಿದ್ದೇವೆ. ಅಂತೆಯೇ ಇಂದು ಬೆಂಗಳೂರು ವಿಭಾಗದ ಸಚಿವ ಸಂಪುಟ ಸಭೆ ನಡೆಸುತ್ತಿದ್ದೇವೆ. ಈ ಸಭೆ ಕೇವಲ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರಕ್ಕೆ ಸೀಮಿತವಲ್ಲ. ಬೆಂಗಳೂರು ವಿಭಾಗದ ಎಲ್ಲಾ ಪ್ರದೇಶಗಳ ಅಭಿವೃದ್ಧಿ ಬಗ್ಗೆ ಚರ್ಚಿಸಲಾಗುವುದು” ಎಂದು ತಿಳಿಸಿದರು.

- Advertisement -


Must Read

Related Articles