Home ಟಾಪ್ ಸುದ್ದಿಗಳು ಸರಕಾರ ಪಂಚಮಸಾಲಿ ಸಮುದಾಯಕ್ಕೆ ನೀಡಿರುವ 2ಡಿ ಮೀಸಲಾತಿ ತಿರಸ್ಕರಿಸಿದ್ದೇವೆ: ಜಯಮೃತ್ಯುಂಜಯ ಸ್ವಾಮೀಜಿ

ಸರಕಾರ ಪಂಚಮಸಾಲಿ ಸಮುದಾಯಕ್ಕೆ ನೀಡಿರುವ 2ಡಿ ಮೀಸಲಾತಿ ತಿರಸ್ಕರಿಸಿದ್ದೇವೆ: ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಮುಂದಿನ 24 ಗಂಟೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ನಮಗೆ ನೀಡುತ್ತೀರೋ ಇಲ್ಲವೋ? ಎಂದು ಪ್ರಶ್ನೆ ಮಾಡಿರುವ ಜಯಮೃತ್ಯುಂಜಯ ಸ್ವಾಮೀಜಿ, ರಾಜ್ಯ ಸರಕಾರ ನೀಡಿದ 2ಡಿ ಮೀಸಲಾತಿಯನ್ನು ನಾವು ತಿರಸ್ಕಾರ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಗುರುವಾರ ಬೆಳಗಾವಿಯಲ್ಲಿ 2ಡಿ ಮೀಸಲಾತಿ ವಿಚಾರವಾಗಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಜನವರಿ 12ರೊಳಗೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕು. ಇಲ್ಲವಾದರೆ ಸರಕಾರದ ವಿರುದ್ಧ ಜನವರಿ 13ರಂದು ಶಿಗ್ಗಾಂವಿಯಲ್ಲಿ 30 ಸಾವಿರ ಜನ ಸೇರಿಸಿ ದೊಡ್ಡ ಹೋರಾಟ ಮಾಡುತ್ತೇವೆ. ಇದರಿಂದ 2023ರ ಚುನಾವಣೆಯಲ್ಲಿ ಗಂಭೀರವಾದ ಪರಿಣಾಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದರು.

ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ತೀವ್ರ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ 2ಡಿ ಮೀಸಲಾತಿಯನ್ನು ನೀಡಲಾಗಿತ್ತು.

Join Whatsapp
Exit mobile version