Home ಟಾಪ್ ಸುದ್ದಿಗಳು ಪ್ರಧಾನಿ ಕಚೇರಿ ಸೂಚನೆ ಗೌರವಿಸಿದ್ದೇವೆ: ಪ್ರೋಟೋಕಾಲ್ ವಿಚಾರವಾಗಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಪ್ರಧಾನಿ ಕಚೇರಿ ಸೂಚನೆ ಗೌರವಿಸಿದ್ದೇವೆ: ಪ್ರೋಟೋಕಾಲ್ ವಿಚಾರವಾಗಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಇಸ್ರೋ ಕಚೇರಿ ಭೇಟಿಗೆ ಪ್ರೋಟೋಕಾಲ್ ಪಾಲಿಸುವ ಅಗತ್ಯವಿಲ್ಲ ಎಂದು ಹೇಳಿದ್ದನ್ನು ನಾವು ಒಪ್ಪಿಕೊಳ್ಳುತ್ತೇವೆ. ನಾವು ಹೋಗಿ ಅವರನ್ನು ಬರಮಾಡಿಕೊಳ್ಳಬೇಕಾಗಿತ್ತು. ಆದರೆ, ನಮಗೆ ಅಧಿಕೃತವಾಗಿ ಪ್ರಧಾನಿ ಕಚೇರಿಯಿಂದಲೇ ಮಾಹಿತಿ ಬಂದಿದ್ದರಿಂದ ನಾವು ಅದನ್ನು ಗೌರವಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.


ಬೆಂಗಳೂರು ಸದಾಶಿವನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಕಚೇರಿಯಿಂದ ಕರೆ ಬಂದ ಕಾರಣ ನಾವು ಮೋದಿಯವರನ್ನು ಬರಮಾಡಿಕೊಳ್ಳಲು ಹೋಗಿಲ್ಲವಷ್ಟೇ. ರಾಜಕೀಯ ಆಟ ಮುಗಿದಿದೆ. ನಾವು ಈಗ ಅಭಿವೃದ್ಧಿಯತ್ತ ನೋಡುತ್ತಿದ್ದೇವೆ. ಮುಖ್ಯಮಂತ್ರಿಯಾಗಲಿ ಅಥವಾ ನಾನಾಗಲಿ ಹೋಗಿ ಮೋದಿಯವರನ್ನು ಬರಮಾಡಿಕೊಳ್ಳಲು ಸಿದ್ಧರಿದ್ದೆವು. ಆದರೆ, ನಮಗೆ ಅವರಿಂದಲೇ ಬರುವುದು ಬೇಡವೆಂಬ ಅಧಿಕೃತ ಮಾಹಿತಿ ಬಂದ ಕಾರಣ ನಾವು ಅವರನ್ನು ಸ್ವಾಗತಿಸಲಿಲ್ಲ” ಎಂದು ಸ್ಪಷ್ಟಪಡಿಸಿದರು.


ಪ್ರಧಾನಿ ಮೋದಿ ಆಗಮನದ ವೇಳೆ ಪ್ರೋಟೋಕಾಲ್ ಪಾಲನೆ ಮಾಡಿಲ್ಲ ಎಂಬ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, “ನಾವು ಸರ್ಕಾರದ ವತಿಯಿಂದ ಸ್ವಾಗತ ಮಾಡಿಸಿದ್ದೇವೆ. ಯಾರಿಗೆ ಎಷ್ಟು ಗೌರವ ಕೊಡಬೇಕು ಎಂಬುದು ನಮಗೆ ಗೊತ್ತಿದೆ. ಬೇರೆ ರಾಜ್ಯಗಳ ತರಹ ಅಲ್ಲ ನಮ್ಮ ಸಂಸ್ಕೃತಿ. ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಪ್ರಧಾನಿಗೆ ಗೌರವ ಕೊಡುತ್ತೇವೆ. ಆರ್.ಅಶೋಕ್ ಗೆ ಸ್ವಲ್ಪ ಪ್ರಾಬ್ಲಂ ಇದೆ. ಕೇಂದ್ರ ಸರ್ಕಾರವೇ ನಮಗೆ ಬರೋದು ಬೇಡ ಅಂತ ಹೇಳಿತ್ತು. ರಾಜಕೀಯ ಪ್ರಜ್ಞೆ, ಸಮಯ ಪ್ರಜ್ಞೆ ಎಲ್ಲವೂ ನಮಗೆ ಇದೆ” ಎಂದು ತಿರುಗೇಟು ನೀಡಿದರು.

Join Whatsapp
Exit mobile version