ಮುನಿರತ್ನ ಧ್ವನಿ ಮಾದರಿಯನ್ನು FSLಗೆ ಕಳಿಸಿದ್ದೇವೆ: ಸಚಿವ ಪರಮೇಶ್ವರ್

Prasthutha|

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಅವರ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್ ಎಸ್ ಎಲ್ ಗೆ ಕಳಿಸಿದ್ದೇವೆ. ಅವರ ಧ್ವನಿ ಮ್ಯಾಚ್ ಆದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಮುನಿರತ್ನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು.


ಮುನಿರತ್ನ ಅವರ ಧ್ವನಿ ಮಾದರಿ ಸಂಗ್ರಹಿಸಿ ಎಫ್ ಎಸ್ ಎಲ್ ಗೆ (FSL) ಕಳಿಸಿದ್ದೇವೆ. ಅವರ ಧ್ವನಿ ಮ್ಯಾಚ್ ಆದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.

- Advertisement -


ಇನ್ನೂ ಮುನಿರತ್ನ ಅವರ ಏಕಾಏಕಿ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮುನಿರತ್ನ ಅವರನ್ನ ಏಕಾಏಕಿ ಬಂಧನ ಮಾಡಿಲ್ಲ. ದೂರು ದಾಖಲಾದ ಹಿನ್ನೆಲೆ ಬಂಧನ ಮಾಡಲಾಗಿದೆ. ವಾಯ್ಸ್ ರೆಕಾರ್ಡ್ ಕೂಡ ಪಡೆದಿದ್ದಾರೆ. ಮುನಿರತ್ನ ವಾಯ್ಸ್ ಸ್ಯಾಂಪಲ್ ಕೂಡ ಪಡೆದು ತನಿಖೆ ಆಗ್ತಿದೆ. ಪ್ರೂವ್ ಆದ್ರೆ ಶಿಕ್ಷೆ ಆಗುತ್ತೆ. ಅಲ್ಲದೇ ಶಾಸಕ ಚೆನ್ನಾರೆಡ್ಡಿ ಮೇಲೆ ಆರೋಪ ಕೇಳಿಬಂದಿದ್ದು, ಅವರ ಮೇಲೂ ಕ್ರಮ ಆಗುತ್ತೆ ಎಂದಿದ್ದಾರೆ.



Join Whatsapp
Exit mobile version