ಶಿವಮೊಗ್ಗ ಗಲಭೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ: ಡಿಜಿಪಿ ಅಲೋಕ್ ಮೋಹನ್

Prasthutha|

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಗಲಭೆ ಸಂಬಂಧಿಸಿದಂತೆ ಪರಿಸ್ಥಿತಿ ನಿಭಾಯಿಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನ ಕೈಗೊಂಡಿದ್ದು, ಸದ್ಯ ಸಹಜ ಸ್ಥಿತಿಯಲ್ಲಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ.

- Advertisement -


ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ನಗರದ ಡಿಸಿಪಿ ಹಾಗೂ ಹಿರಿಯ ಅಧಿಕಾರಿಗಳೊಡನೆ ಸಭೆ ನಡೆಸಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಜಿಪಿ, ಶಿವಮೊಗ್ಗ ಗಲಭೆ ಘಟನೆಯನ್ನ ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

Join Whatsapp