Home ಟಾಪ್ ಸುದ್ದಿಗಳು ರೈತರ, ವಿದ್ಯಾರ್ಥಿಗಳ, ಸಾಮಾನ್ಯರ ಪ್ರಕರಣಗಳನ್ನು ವಾಪಸ್ ಪಡೆದಿದ್ದೇವೆ: ಸಚಿವ ಪರಮೇಶ್ವರ್

ರೈತರ, ವಿದ್ಯಾರ್ಥಿಗಳ, ಸಾಮಾನ್ಯರ ಪ್ರಕರಣಗಳನ್ನು ವಾಪಸ್ ಪಡೆದಿದ್ದೇವೆ: ಸಚಿವ ಪರಮೇಶ್ವರ್

ಬೆಂಗಳೂರು: ಹುಬ್ಬಳ್ಳಿ ಪ್ರಕರಣವನ್ನು ಮಾತ್ರ ಹಿಂಪಡೆದಿಲ್ಲ. ರೈತರು, ವಿದ್ಯಾರ್ಥಿಗಳು, ಸಾಮಾನ್ಯ ಜನರು ಕೈಗೊಂಡಿದ್ದ ಪ್ರತಿಭಟನೆಯ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.


ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಸುಳ್ಳು ಕೇಸ್ ಗಳನ್ನು ಹಾಕಿದ್ರೆ ಪರಿಶೀಲಿಸಿ ವಾಪಸ್ ಪಡೆಯಲು ಸರ್ಕಾರಕ್ಕೆ ಅವಕಾಶ ಇದೆ. ಯಾರೋ ಹೇಳಿದ್ರು ಅಂತ ಕೇಸ್ ವಾಪಸ್ ಪಡೆಯಲ್ಲ. ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಮಾಡುತ್ತೇವೆ. ಇದರಲ್ಲಿ ಕೇವಲ ಅಲ್ಪಸಂಖ್ಯಾತರಷ್ಟೇ ಇಲ್ಲ, ವಿದ್ಯಾರ್ಥಿಗಳು, ರೈತರು ಇದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್ಗಳನ್ನೂ ಪರಿಶೀಲನೆ ಮಾಡುತ್ತೇವೆ. ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ ನಿಯಮಾನುಸಾರ ವಾಪಸ್ ಪದೆಯುತ್ತೇವೆ ಎಂದು ಹೇಳಿದರು.

ಹುಬ್ಬಳ್ಳಿ ಗಲಭೆ ಕೇಸ್ ಗಳು ವಾಪಸ್ ವಿಚಾರವಾಗಿ ಮಾತನಾಡಿ, ಕೇಸ್ಗಳನ್ನು ವಾಪಸ್ ಪಡೆಯಲು ಯಾರಾದರೂ ಮನವಿ ಮಾಡ್ತಾರೆ. ಆಗ ನಾವು ಅದರ ಪರಿಶೀಲನೆಗೆ ಸಂಪುಟ ಉಪಸಮಿತಿ ಮಾಡುತ್ತೇವೆ. ಸಂಬಂಧಿಸಿದ ಇಲಾಖೆಗೆ ಮಾಹಿತಿ ಕೇಳುತ್ತೇವೆ. ನಂತರ ಸಂಪುಟ ಉಪಸಮಿತಿ ಅದರ ಬಗ್ಗೆ ತೀರ್ಮಾನ ಮಾಡುತ್ತದೆ. ವಾಪಸ್ ತಗೋಬೇಕಾ ಬೇಡವಾ ಎಂದು ಉಪಸಮಿತಿ ನಿರ್ಧರಿಸುತ್ತೆ ಎಂದು ಹೇಳಿದ್ದಾರೆ.

Join Whatsapp
Exit mobile version