ಜನಾದೇಶವನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇವೆ: ರಾಹುಲ್‌ ಗಾಂಧಿ

Prasthutha|

ನವದೆಹಲಿ: ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ.

- Advertisement -

ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದ ಜನಾದೇಶವನ್ನು ನಾವು ವಿನಮ್ರತೆಯಿಂದ ಸ್ವೀಕರಿಸುತ್ತೇವೆ. ಆದರೆ ಸಿದ್ಧಾಂತದ ಯುದ್ಧ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.

ಇದೇ ಸಮಯದಲ್ಲಿ ತೆಲಂಗಾಣದ ಫಲಿತಾಂಶಕ್ಕೆ ಸಂತೃಪ್ತಿ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ನಾನು ತೆಲಂಗಾಣದ ಜನರಿಗೆ ತುಂಬಾ ಕೃತಜ್ಞನಾಗಿದ್ದೇನೆ. ಪ್ರಜಾಲು ತೆಲಂಗಾಣ ಮಾಡುವ ಭರವಸೆಯನ್ನು ನಾವು ಖಂಡಿತವಾಗಿಯೂ ಈಡೇರಿಸುತ್ತೇವೆ. ಎಲ್ಲಾ ಕಾರ್ಯಕರ್ತರ ಕಠಿಣ ಪರಿಶ್ರಮ ಮತ್ತು ಬೆಂಬಲಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ರಾಹುಲ್ ಗಾಂಧಿ Xನಲ್ಲಿ ಬರೆದಿದ್ದಾರೆ.



Join Whatsapp