Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ಕೈಯನ್ನು ನಾವು ಬಲಪಡಿಸಬೇಕಿದೆ: ಹೆಚ್ ಡಿ ದೇವೇಗೌಡ

ಪ್ರಧಾನಿ ಮೋದಿ ಕೈಯನ್ನು ನಾವು ಬಲಪಡಿಸಬೇಕಿದೆ: ಹೆಚ್ ಡಿ ದೇವೇಗೌಡ

ಹಾಸನ: ಈಗಿನ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಕೈಯನ್ನು ನಾವು ಬಲಪಡಿಸಬೇಕಿದೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿಯನ್ನು ಎದುರಿಸಿದ್ದೆವು. ಆದರೆ ಈಗ ಅದನ್ನೆಲ್ಲ ಮರೆಯಬೇಕು. ಬಿಜೆಪಿ ಜೊತೆ ಒಗ್ಗಟ್ಟಾಗಿ ಕೆಲಸ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸೋಣ. ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ ಎಂದರು.

ಪಂಚ ರಾಜ್ಯಗಳ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದೆ. ಒಂದೆರಡು ಕಡೆ ಕಾಂಗ್ರೆಸ್, ಒಂದೆರಡು ಕಡೆ ಬಿಜೆಪಿ ಎಂದು ಸಮೀಕ್ಷೆ ಫಲಿತಾಂಶ ತಿಳಿಸಿದೆ. ವಿಧಾನಸಭಾ ಚುನಾವಣೆ ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ. ಇದು ನನ್ನ ರಾಜಕೀಯ ಅನುಭವದಲ್ಲಿ ಹೇಳುತ್ತಿದ್ದೇನೆ ಎಂದು ದೇವೇಗೌಡ ಹೇಳಿದರು.

Join Whatsapp
Exit mobile version