Home ಟಾಪ್ ಸುದ್ದಿಗಳು ಸದಾನಂದ ಗೌಡರ ನಿರ್ಧಾರಕ್ಕೆ ನಮ್ಮ ಬೆಂಬಲ: ಒಕ್ಕಲಿಗರ ಸಂಘದಿಂದ ಘೋಷಣೆ

ಸದಾನಂದ ಗೌಡರ ನಿರ್ಧಾರಕ್ಕೆ ನಮ್ಮ ಬೆಂಬಲ: ಒಕ್ಕಲಿಗರ ಸಂಘದಿಂದ ಘೋಷಣೆ

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿ ಸುದೀರ್ಘ ಚರ್ಚೆ ನಡೆಸಿದ್ದಾರೆ.


ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ. ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದರು.


ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

Join Whatsapp
Exit mobile version