Home ಟಾಪ್ ಸುದ್ದಿಗಳು ತಾಯ್ನಾಡಿಗೆ ಕರೆದೊಯ್ಯಲು ಟಾಯ್ಲೆಟ್ ಸ್ವಚ್ಛಗೊಳಿಸುವಂತೆ ಭಾರತೀಯ ರಾಯಭಾರ ಕಚೇರಿ ಬಲವಂತಪಡಿಸಿದೆ: ಸಂತ್ರಸ್ತ ವಿದ್ಯಾರ್ಥಿಗಳ ಅಳಲು

ತಾಯ್ನಾಡಿಗೆ ಕರೆದೊಯ್ಯಲು ಟಾಯ್ಲೆಟ್ ಸ್ವಚ್ಛಗೊಳಿಸುವಂತೆ ಭಾರತೀಯ ರಾಯಭಾರ ಕಚೇರಿ ಬಲವಂತಪಡಿಸಿದೆ: ಸಂತ್ರಸ್ತ ವಿದ್ಯಾರ್ಥಿಗಳ ಅಳಲು

ಕೀವ್: ಉಕ್ರೇನ್ ನಲ್ಲಿ ಸಿಲುಕಿರುವ ಸಂತ್ರಸ್ತರನ್ನು ಭಾರತಕ್ಕೆ ಕರೆದೊಯ್ಯಲು ಶೌಚಾಲಯ ಸ್ವಚ್ಛಗೊಳಿಸುವಂತೆ ಭಾರತದ ರಾಯಭಾರಿ ಕಚೇರಿ ಬಲವಂತಪಡಿಸಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಮಾನ ಹತ್ತುವ ಮೊದಲು ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ರಾಯಭಾರಿ ಕಚೇರಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳುತ್ತಿರುವುದು ವೈರಲ್ ವೀಡಿಯೋದಲ್ಲಿ ಸೆರೆಯಾಗಿದೆ.

ಸದ್ಯ ಈ ವೀಡಿಯೋವನ್ನು ಕಾಂಗ್ರೆಸ್ ಸೇವಾದಳದ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ರಾಯಭಾರಿ ಕಚೇರಿಯ ಅಧಿಕಾರಿಗಳು ಶೌಚಾಲಯ ಸ್ವಚ್ಛಗೊಳಿಸುವಂತೆ ಬಲವಂತಪಡಿಸುತ್ತಿರುವುದು ಖಂಡನೀಯ ಎಂದು ಸೇವಾದಳ ಆಕ್ರೋಶ ವ್ಯಕ್ತಪಡಿಸಿದೆ.

ವೀಡಿಯೋದಲ್ಲಿ ಮಾತನಾಡುತ್ತಿರುವ ವಿದ್ಯಾರ್ಥಿನಿ, ನಾವು ಒಂದು ಪುನರ್ವಸತಿ ಕೇಂದ್ರದಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ರಾಯಭಾರಿ ಕಚೇರಿ ಅಧಿಕಾರಿಗಳು ಮೊದಲು ಭಾರತಕ್ಕೆ ಹೋಗಲು ಬಯಸುವವರು ಶೌಚಾಲಯ ಸ್ವಚ್ಛಗೊಳಿಸುವಂತೆ ಬಲವಂತಪಡಿಸಿದ್ದಾರೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಸದ್ಯ ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ವಿಚಾರದಲ್ಲಿ ಭಾರತ ಸರ್ಕಾರ ಎಡವಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬರುತ್ತಿದೆ. ಯುದ್ಧ ಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಭಾರತಕ್ಕೆ ಮರಳುತ್ತಿದ್ದು, ಸರ್ಕಾರದ ವೈಫಲ್ಯವನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತಿದ್ದಾರೆ.

Join Whatsapp
Exit mobile version