ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರು ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್ಪೋರ್ಟ್ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ಪ್ರಜ್ವಲ್ ರೇವಣ್ಣ ಅವರನ್ನು ಕೇಂದ್ರ ಸರಕಾರವೇ ರಕ್ಷಣೆ ಮಾಡುತ್ತಿದೆ ಎಂದು ಆರೋಪಿಸಿದರು.