ಬಿಟ್ ಕಾಯಿನ್ ಅಕ್ರಮದ ಬಗ್ಗೆ ಸಂಪೂರ್ಣ ತನಿಖೆ ಮಾಡುತ್ತೇವೆ: ಪರಮೇಶ್ವರ್

Prasthutha|

ಬೆಂಗಳೂರು: ಬಿಟ್ ಕಾಯಿನ್ ಅಕ್ರಮದ ಬಗ್ಗೆ ಸಂಪೂರ್ಣ ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.

- Advertisement -


ವಿಧಾನಸೌಧದಲ್ಲಿ ಮಾಧ್ಯದಮವರೊಂದದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಅಕ್ರಮದ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತೇವೆ. ಹಿಂದಿನ ಸರ್ಕಾರ ತನಿಖೆಯನ್ನು ಮುಕ್ತಾಯಗೊಳಿಸಿದೆ. ನಾವು ಮರು ತನಿಖೆ ಮಾಡುತ್ತೇವೆ. ಸಿಐಡಿಗೆ ಕೊಡಬೇಕೋ ಅಥವಾ ಬೇರೆ ತನಿಖಾ ಸಂಸ್ಥೆಗೆ ಕೊಡಬೇಕಾ ಎಂಬುದನ್ನು ನಿರ್ಧರಿಸುತ್ತೇವೆ ಎಂದರು.


ಸದ್ಯ ಸಿಐಡಿ ಪ್ರಬಲವಾಗಿದೆ. ಬೇರೆ ಬೇರೆ ಏಜೆನ್ಸಿಗಳ ಸಹಕಾರವನ್ನು ಸಿಐಡಿಗೆ ಕೊಡಿಸಲಾಗುವುದು. ಎರಡು ಬಾರಿ ಬಿಟ್ ಕಾಯಿನ್ ಹಗರಣ ಸಂಬಂಧ ಸಭೆ ಮಾಡಿದ್ದೇನೆ. ಟೆಕ್ನಿಕಲ್ ಆಗಿ ಯಾರಿಗೆಲ್ಲ ಹಣ ಹೋಗಿದೆ. ಕಾನೂನು ಬಾಹಿರವಾಗಿ ಸಾವಿರಾರು ಕೋಟಿ ಹಣ ವರ್ಗಾವಣೆಯಾಗಿದೆ. ಕೆಲವೊಂದು ವಿಚಾರಗಳನ್ನು ಹೇಳಲು ಆಗಲ್ಲ. ಹಗರಣದ ಬಗ್ಗೆ ಬೆಳಕು ಚೆಲ್ಲುತ್ತೇವೆ. ಸಿಐಡಿಗೆ ಕೊಡೋ ಬಗ್ಗೆ ತೀರ್ಮಾನ ಮಾಡಬೇಕಾಗಿದೆ ಎಂದು ಹೇಳಿದರು.