ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಬಿಜೆಪಿ ಮಾಡಿರುವ ಎಲ್ಲ ಅವಾಂತರಗಳನ್ನೂ ಸರಿಪಡಿಸುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ.
ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಶಾಲೆಗಳು ಆರಂಭಗೊಳ್ಳುತ್ತಿವೆ, ಮಕ್ಕಳ ಶಿಕ್ಷಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಮಾಡಿದ ಎಲ್ಲಾ ಅವಾಂತರಗಳನ್ನೂ ಸರಿಪಡಿಸುತ್ತೇವೆ‘ ಎಂದು ಕಾಂಗ್ರೆಸ್ ಹೇಳಿದೆ.
‘ಸಮವಸ್ತ್ರ, ಪಠ್ಯಪುಸ್ತಕ, ಬಿಸಿಯೂಟ, ಶೂ, ಸಾಕ್ಸ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಲು ಕ್ರಮ ಕೈಗೊಳ್ಳುತ್ತೇವೆ‘ ಎಂದು ಕಾಂಗ್ರೆಸ್ ಭರವಸೆ ನೀಡಿದೆ.
ಈ ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದ ಪಠ್ಯ ಪರಿಷ್ಕರಣೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅದನ್ನು ಸರಿಪಡಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು.