ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ: ಉದ್ಧವ್ ಠಾಕ್ರೆ

Prasthutha|

►‘ಚಂದ್ರಬಾಬು ನಾಯ್ಡುಗೆ ಬಿಜೆಪಿ ಕಿರುಕುಳ ನೀಡುತ್ತಿದೆ’

- Advertisement -


ಮುಂಬೈ: ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗೊಳಿಸಲು ಹಾಗೂ ಸಂವಿಧಾನವನ್ನು ಉಳಿಸಲು ನಾವು ಬದ್ಧರಾಗಿದ್ದೇವೆ. ಜತೆಗೆ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ’ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

543 ಸದಸ್ಯ ಬಲದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ 291 ಸ್ಥಾನಗಳನ್ನು ಹಾಗೂ ‘ಇಂಡಿಯಾ’ ಮೈತ್ರಿಕೂಟ 234 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ಸರ್ಕಾರ ರಚಿಸುವ ಸಂಬಂಧ ಎನ್ಡಿಎ ಹಾಗೂ ಇಂಡಿಯಾ ನಾಯಕರು ಇಂದು ಸಭೆ ಸೇರಲಿದ್ದಾರೆ.
‘ಇಂಡಿಯಾ’ ಬಣದ ಸಭೆ ಕುರಿತು ಮಾತನಾಡಿರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ‘ಇಂಡಿಯಾ’ ಮೈತ್ರಿಕೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗಾಣಿಸುವುದರ ಜತೆಗೆ ಸಂವಿಧಾನವನ್ನು ಉಳಿಸಬೇಕೆಂದು ನಿರ್ಧರಿಸಿದ್ದೆವು. ಆದೇ ನಿಟ್ಟಿನಲ್ಲಿ ಪ್ರಧಾನಿ ಅಭ್ಯರ್ಥಿ ಕುರಿತು ಚರ್ಚೆ ನಡೆಸುತ್ತೇನೆ ಎಂದಿದ್ದಾರೆ.

- Advertisement -


ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡುಗೆ ಕಿರುಕುಳ ನೀಡುತ್ತಿದೆ ಎಂದು ಠಾಕ್ರೆ ಆರೋಪಿಸಿದ್ದಾರೆ.



Join Whatsapp