ಅಹಮದಾಬಾದ್: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಬಿಜೆಪಿಯನ್ನು ಸೋಲಿಸಿದ ಹಾಗೆ ಮುಂದಿನ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಸೋಲಿಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಅಹಮದಾಬಾದ್ ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
ನಮ್ಮ ಕಚೇರಿಗೆ ಹಾನಿ ಮಾಡುವ ಮೂಲಕ ಬಿಜೆಪಿಯವರು ನಮಗೆ ಸವಾಲೊಡ್ಡಿದರು. ನಮ್ಮ ಕಚೇರಿಯನ್ನು ಹಾನಿ ಮಾಡಿದ ಹಾಗೆ, ನಾವು ಅವರ ಸರ್ಕಾರವನ್ನು ಕಿತ್ತೊಗೆಯಲಿದ್ದೇವೆ. ಬರೆದಿಟ್ಟುಕೊಳ್ಳಿ, ಅಯೋಧ್ಯೆಯಲ್ಲಿ ಸೋಲಿಸಿದ ಹಾಗೆ, ಗುಜರಾತ್ ನಲ್ಲಿ ಬಿಜೆಪಿ ಹಾಗೂ ಮೋದಿಯನ್ನು ನಾವು ಸೋಲಿಸಲಿದ್ದೇವೆ. ಗುಜರಾತ್ ನಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಹೊಸ ಆರಂಭ ಮಾಡಲಿದೆ ಎಂದು ರಾಹುಲ್ ಹೇಳಿದ್ದಾರೆ