ಚನ್ನಪಟ್ಟಣದಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ: ಡಿಕೆ ಸುರೇಶ್

Prasthutha|

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ. ಅಲ್ಲಿ ಕಾಂಗ್ರೆಸ್ ​ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಡಿಕೆ ಸುರೇಶ್ ಹೇಳಿದರು.

- Advertisement -

ಈ ಮೂಲಕ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಬಗ್ಗೆ ಕುತೂಹಲ ಹೆಚ್ಚಿಸಿದ್ದಾರೆ.

ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ.

- Advertisement -

ಕಳೆದ ಹತ್ತು ವರ್ಷಗಳಿಂದ ಅಭಿವೃದ್ಧಿ ಕೆಲಸ‌ ಮಾಡಿದ್ದೇನೆ. ನನಗೆ ರಾಮನಗರ ಮಾಧ್ಯಮದವರು ಪ್ರೋತ್ಸಾಹ ಕೊಟ್ಟಿದ್ದಾರೆ. ರಾಜಕೀಯದಲ್ಲಿ ನನಗೆ ಆಸಕ್ತಿ ಇರಲಿಲ್ಲ. ಉಪ‌ಚುನಾವಣೆ ನಡೆದಾಗ ಜಿಲ್ಲೆ ಹಾಗೂ ರಾಜ್ಯದ ನಾಯಕರು ನನ್ನನ್ನು ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದರು. ಡಿಕೆ ‌ಶಿವಕುಮಾರ್ ಅವರಿಗೆ ಒತ್ತಡ ತಂದು ನಾಯಕರು ನನಗೆ ಅವಕಾಶ ಕೊಟ್ಟಿದ್ದರು. ಹತ್ತು ವರ್ಷ ಎಂಟು ತಿಂಗಳುಗಳ ಕಾಲ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ. ಅವಕಾಶಕ್ಕೆ ತಕ್ಕಂತೆ ಬಡವರು, ದೀನ ದಲಿತರು, ಮಹಿಳೆಯರ ಅಭಿವೃದ್ಧಿಗೆ ನನ್ನ ಗಮನಕ್ಕೆ ಬಂದಿದನ್ನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕೇಂದ್ರ ಸರ್ಕಾರ ಆಗಲೀ, ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ತಲುಪುವ ಹಾಗೆ ಹಗಲಿರುಳು ಶ್ರಮಿಸಿದ್ದೇನೆ ಎಂದು ಸುರೇಶ್ ಹೇಳಿದರು.

Join Whatsapp