Home ಟಾಪ್ ಸುದ್ದಿಗಳು ಅಕ್ಕಿ ಕೊಡ್ತೇವೆ, ಆದರೆ ಖರೀದಿಗೆ ರಾಜ್ಯದಲ್ಲಿ ಹಣವೇ ಇಲ್ಲ: ಪ್ರಲ್ಹಾದ್ ಜೋಶಿ

ಅಕ್ಕಿ ಕೊಡ್ತೇವೆ, ಆದರೆ ಖರೀದಿಗೆ ರಾಜ್ಯದಲ್ಲಿ ಹಣವೇ ಇಲ್ಲ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಕರ್ನಾಟಕಕ್ಕೆ ನಾವು ಬೇಕಾದಷ್ಟು ಅಕ್ಕಿ ನೀಡಲು ಸಿದ್ಧರಿದ್ದೇವೆ. ಆದರೆ ರಾಜ್ಯ ಸರ್ಕಾರ ಮಾತ್ರ ಅಕ್ಕಿ ತೆಗೆದುಕೊಳ್ಳುವುದಿಲ್ಲ. ಯಾಕೆಂದರೆ ಸರ್ಕಾರದ ಬಳಿ ಅಕ್ಕಿ ಖರೀದಿಗೆ ಹಣವಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಸುದ್ದಿಗಾರರ ಜತೆಗೆ ಮಾತನಾಡಿ, ಕಳೆದ ವರ್ಷ ಕೇಳಿದಾಗ ಅಕ್ಕಿ ನೀಡಿಲ್ಲ ಎಂದು ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದರು. ರಾಜ್ಯ ಸರ್ಕಾರದವರು ಜನರಿಗೆ 5 ಕೆ.ಜಿ. ಅಕ್ಕಿ ಬದಲು 10 ಕೆ.ಜಿ. ನೀಡುವುದಾಗಿ ಹೇಳಿದ್ದಾರೆಯೇ ಹೊರತು ಕೇಂದ್ರ ಸರ್ಕಾರ ಕೊಟ್ಟರೆ ಕೊಡುತ್ತೇವೆಂದು ಎಲ್ಲೂ ಹೇಳಿರಲಿಲ್ಲ. ಕಳೆದ ಬಾರಿ ಅಕ್ಕಿ ಸಂಗ್ರಹ ಕಡಿಮೆ ಇದ್ದ ಕಾರಣ ಎಲ್ಲ ರಾಜ್ಯಗಳಿಗೂ ಅಕ್ಕಿ ವಿತರಣೆ ಸ್ಥಗಿತಗೊಳಿಸಿದ್ದೆವು. ಇದೀಗ ಮತ್ತೆ ಆರಂಭಿಸಿದ್ದೇವೆ. ಆದರೆ ಕರ್ನಾಟಕ ಸರ್ಕಾರ ಅಕ್ಕಿ ಕೊಳ್ಳುವುದಿಲ್ಲ ಎಂದರು. ಸಿದ್ದರಾಮಯ್ಯ ಅವರು ಅಕ್ಕಿ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ. ಇಂಥ ರಾಜಕಾರಣವನ್ನು ಅವರು ಮೊದಲು ನಿಲ್ಲಿಸಲಿ ಎಂದು ಕಿಡಿಕಾರಿದರು.

Join Whatsapp
Exit mobile version