Home ಟಾಪ್ ಸುದ್ದಿಗಳು ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ: ಸಂಸದ ಡಿಕೆ ಸುರೇಶ್

ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ: ಸಂಸದ ಡಿಕೆ ಸುರೇಶ್

ನವದೆಹಲಿ: ಬಜೆಟ್ ನಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಸಂಸದ ಡಿಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ದೆಹಲಿಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂತವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದರು.


ಹೊಸ ಪದಗಳನ್ನು ಬಳಸಿ, ಹೊಸ ಹೆಸರಿಟ್ಟು ಒಂದಷ್ಟು ಯೋಜನೆ ಘೋಷಿಸಿದ್ದಾರೆ. ನಮಗೆ ಬರಬೇಕಾದ ಹಣವೇ ಸರಿಯಾಗಿ ಬರುತ್ತಿಲ್ಲ. ಇನ್ನೂ 75,000 ಕೋಟಿ ಬಡ್ಡಿ ರಹಿತ ಸಾಲ ಕೊಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Join Whatsapp
Exit mobile version