ಇಡೀ ಭಾರತವನ್ನು ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡುತ್ತೇವೆ: ಯತ್ನಾಳ್

Prasthutha|

- Advertisement -

ಶಿಗ್ಗಾಂವಿ: ಇಡೀ ಭಾರತವನ್ನು ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆಯನ್ನಾಗಿ ಪರಿವರ್ತಿಸುತ್ತೇವೆಂದು ಬಿಜೆಪಿ ಹಿರಿಯ ನಾಯಕ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ದುಂಢಸಿಯಲ್ಲಿ 19 ಎಕರೆ ಜಮೀನು ವಕ್ಪ್ ಆಸ್ತಿ ಮಾಡಿದ್ದಾರೆ. ನಾನು ವಕ್ಪ್ ಬಗ್ಗೆ ಆಗ ಮಾತನಾಡಲು ವಿಶ್ವೇಶ್ವರ್ ಹೆಗಡೆ, ಬೊಮ್ಮಾಯಿ ಕಾರಣ. ಇನ್ನೂ ಎಷ್ಟು ವರ್ಷ ಇಂದಿರಾ ಗಾಂಧಿ ಅಂತ ಹೇಳುತ್ತಿರಿ, ಜಿಲೇಬಿ ಫ್ಯಾಕ್ಟರಿ ಮಾಡುತ್ತೇನೆ. ಬಟಾಟಿಯಲ್ಲಿ ಬಂಗಾರ ತೆಗೆಯುತ್ತೇನೆ ಅನ್ನುವ ಹಾಪ್ ಮ್ಯಾಡ್ ರಾಹುಲ್ ಗಾಂಧಿ ಮಾತು ಕೇಳುತ್ತೀರಾ ಎಂದು ಪ್ರಶ್ನಿಸಿದರು.

- Advertisement -

ಪ್ರಧಾನಿ ಮೋದಿ 10 ವರ್ಷದಲ್ಲಿ ಸಾಕಷ್ಟು ಸುಧಾರಣೆ ಮಾಡಿದ್ದಾರೆ. ಈಗ ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ‌. ಕಾಂಗ್ರೆಸ್‌ನವರು ಸೈನ್ಯಕ್ಕೆ ಎಕೆ 47 ಬಂದೂಕು ಬಳಕೆ ಮಾಡಲು ಅವಕಾಶ ಕೊಡುತ್ತಿರಲಿಲ್ಲ. ಈಗ ಪ್ರಧಾನಿ ಮೋದಿ ನಮ್ಮ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ನೆಹರು ಚೀನಾ ಯುದ್ಧದ ಸಂದರ್ಭದಲ್ಲಿ ನಮ್ಮ ಸೈನಿಕರಿಗೆ ಚಸ್ಮಾ ಕೂಡ ಕೊಟ್ಟಿರಲಿಲ್ಲ. ಅವರಿಂದ ನಮ್ಮ ಸೈನಿಕರಿಗೆ ಸಾಕಷ್ಟು ಅನ್ಯಾಯವಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿಗೆ ನಮಸ್ಕಾರ ಮಾಡಿಕೊಂಡು ತಿರುಗಾಡಿದರು. ನಮ್ಮ ಪ್ರಧಾನಿ ನಾನು ಪ್ರಧಾನ ಸೇವಕ ಯಾರೂ ಕಾಲಿಗೆ ಬೀಳಬೇಕಿಲ್ಲ.

ವಕ್ಫ್ ಕಾಯ್ದೆ ಎಷ್ಟು ಅಪಾಯಕಾರಿ ಇದೆ ಎಂಬುದು ಈಗೀಗ ಜನರಿಗೆ ಗೊತ್ತಾಗುತ್ತಿದೆ. ಅವರು ಶೇ.30 ಜನಸಂಖ್ಯೆ. ಆದರೆ, ಈಗ ನಮ್ಮವರು ಶಾಸಕರಾಗಲು ಹರಸಾಹಸ ಪಡಬೇಕಿದೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಅವರಿಗೆ ಹೋಲಿಕೆ ಮಾಡಿ ನೋಡಿ, ಅವರ ಅಭ್ಯರ್ಥಿ ಬಗ್ಗೆ ಅಜ್ಜಂಪೀರ್ ಖಾದ್ರಿನೇ ಅವನ ಬಣ್ಣ ಬಿಚ್ಚಿದ್ದಾನೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಡಿ.ಕೆ.ಶಿವಕುಮಾರ್ ಮುಂತಾದವರು ನಮ್ಮ ಮುಖಾ ನೋಡಿ ಮತ ಹಾಕಿ ಎನ್ನುತ್ತಾರೆ. ನಾವು ಯಾರ ಮುಖ ನೋಡಿ ಹಾಕಬೇಕು. ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಪಿಎ ಮೂಲಕ ಸರ್ಕಾರಿ ಅಧಿಕಾರಿಯನ್ನು ಕೊಂದಿದ್ದೀರಿ. ಸಚಿವ ಆರ್.ಬಿ.ತಿಮ್ಮಾಪುರ 900 ಕೋಟಿ ರೂ. ಲೂಟಿ ಮಾಡಿದ್ದಾರೆ. ನೀವು ಹಿಂಗೆ ಇದ್ದರೆ ಎಲ್ಲ ಆಸ್ತಿ ಹೋಗುತ್ತದೆ. ಎರಡು ಸಾವಿರ ರೂಪಾಯಿ ಮಾತ್ರ ಉಳಿಯುತ್ತದೆ ಎಂದರು.



Join Whatsapp