ದೂರು ಕೊಡುವ ಸಂತ್ರಸ್ತೆಯರಿಗೆ ನಾವು ರಕ್ಷಣೆ ಕೊಡುತ್ತೇವೆ: ಪರಮೇಶ್ವರ್

Prasthutha|

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರವಾಗಿ ಸಂತ್ರಸ್ತೆಯರು ಪೊಲೀಸರು ಹಾಗೂ ಎಸ್ ಐಟಿ ಮುಂದೆ ಬಂದು ಧೈರ್ಯವಾಗಿ ಹೇಳಿಕೊಳ್ಳಬೇಕು. ಈ ಹಿಂದೆಯೇ ಅವರಿಗೆ ರಕ್ಷಣೆ ಕೊಡುವುದಾಗಿ ಹೇಳಿದ್ದೇವೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

- Advertisement -


ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರು ನಿನ್ನೆ ರಾತ್ರಿ ಸುಮಾರು 12:50ರ ಸುಮಾರಿಗೆ ಜರ್ಮನಿಯಿಂದ ಬೆಂಗಳೂರಿಗೆ ಬಂದಿದ್ದಾರೆ. ಅವರ ವಿರುದ್ಧ ಬಂಧನದ ವಾರಂಟ್ ಇತ್ತು. ಈಗ ಅವರ ಬಂಧನವಾಗಿದೆ ಎಂಬ ವಿಚಾರ ಗೊತ್ತಾಗಿದೆ. ಅಧಿಕಾರಿಗಳು ಅವರ ವಿರುದ್ಧ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಿದ್ದಾರೆ. ಅಧಿಕಾರಿಗಳಿಗೆ ಅವರು ಸಹಕಾರ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ಸಹಜವಾಗಿಯೇ ಅವರು ತನಿಖೆಗೆ ಸಹಕಾರ ಕೊಡಬೇಕು ಎಂದಿದ್ದಾರೆ.



Join Whatsapp