Home ಟಾಪ್ ಸುದ್ದಿಗಳು 2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಅಂತ ಡಿಸಿಎಂ ಹೇಳಿದರೆ ಸುಮ್ಮನಾಗುತ್ತೇವೆ; ಅಶೋಕ್

2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಅಂತ ಡಿಸಿಎಂ ಹೇಳಿದರೆ ಸುಮ್ಮನಾಗುತ್ತೇವೆ; ಅಶೋಕ್

0

ಬೆಂಗಳೂರು: ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಸಿಎಂ ಆಗಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕಿಸಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಸಿಎಂ ಆಗಿಯೇ ಇರುತ್ತಾರೆಂದು ಪಕ್ಷದ ವರಿಷ್ಠರು ಹೇಳಬೇಕು. ಆದರೆ, ಭಯದಿಂದ ಸ್ವತಃ ಸಿದ್ದರಾಮಯ್ಯನವರೇ ಅದನ್ನು ಪದೇ ಪದೇ ಹೇಳುತ್ತಿದ್ದಾರೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎನ್ನುವ ಡಿ.ಕೆ.ಶಿವಕುಮಾರ್‌ ಅವರೇ ಈ ರೀತಿಯ ಸಂದೇಶ ನೀಡುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಅಭಿವೃದ್ಧಿ ಶೂನ್ಯವಾಗಿ ಶಾಸಕರು ಬೇಸರಗೊಂಡಿದ್ದಾರೆ. ಜನರಲ್ಲಿ ವಿಶ್ವಾಸ ಹೊರಟುಹೋಗಿದೆ ಎಂದರು.

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್‌ ಸಿಂಗ್‌ ಹೆಸರು ಸೂಕ್ತವಲ್ಲ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು ಬದಲಿಸುತ್ತಿದ್ದಾರೆ. ಪೂರ್ವಿಕರು ಇಟ್ಟ ಹೆಸರನ್ನು ಹೀಗೆ ಬದಲಿಸಬಾರದು. ಬೆಂಗಳೂರನ್ನು ಈಗಾಗಲೇ ಒಡೆದು ಹಾಕಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬೆಂಗಳೂರನ್ನು ಒಂದಾಗಿಸಲಿದೆ. ಬೆಂಗಳೂರು ಅಭಿವೃದ್ಧಿ ಮಾಡುವುದು ಬಿಟ್ಟು, ನಾಮಫಲಕ ಬದಲಿಸುವುದರಿಂದ ಕೋಟ್ಯಂತರ ರೂಪಾಯಿ ವ್ಯರ್ಥವಾಗುತ್ತದೆ. ದಕ್ಷಿಣ, ಉತ್ತರ ಎಂದು ಹೆಸರು ನೀಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಹೇಳಿದರು.

NO COMMENTS

LEAVE A REPLY

Please enter your comment!
Please enter your name here

Exit mobile version