ಲೌಡ್ ಸ್ಪೀಕರ್ ಆದೇಶ ಪಾಲಿಸದವರ ಮೇಲೆ ಗುಂಡು ಹೊಡಿತೀವಿ: ಮುತಾಲಿಕ್ ವಿವಾದಾತ್ಮಕ ಹೇಳಿಕೆ

Prasthutha|

ಹುಬ್ಬಳ್ಳಿ: ಲೌಡ್ ಸ್ಪೀಕರ್ ವಿಚಾರವಾಗಿ ಸುಪ್ರೀಂ ಆದೇಶ ಪಾಲಸದವರ ಮೇಲೆ ಗುಂಡು ಹೊಡೆಯುತ್ತೇವೆ ಎಂದು ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

- Advertisement -

ಹುಬ್ಬಳ್ಳಿಯ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್, ಒಂದು ವರ್ಷದಿಂದ ನಾವು ಲೌಡ್ ಸ್ಪೀಕರ್ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ಇದರ ಮುಂದುವರಿದ ಭಾಗವಾಗಿ ನಾವು ಭಜನೆ ಹಾಗೂ ಭಕ್ತಿಗೀತೆಗಳ ಅಭಿಯಾನಕ್ಕೂ ಚಾಲನೆ ನೀಡಿದ್ದೇವೆ. ಆದರೆ ಸರ್ಕಾರ ಕೇವಲ ಒಂದು ಪತ್ರ ಕಳುಹಿಸಿ ತಮ್ಮ ಕೆಲಸ ಮುಗಿಯಿತು ಎಂದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.

ಲೌಡ್ ಸ್ಪೀಕರ್ ವಿಚಾರದಲ್ಲಿ ಯಾರು ಕಾನೂನು ಪಾಲನೆ ಮಾಡುತ್ತಿಲ್ಲವೋ, ಅವರಿಗೆ ಗುಂಡು ಹೊಡೆಯಬೇಕು. ನಿಮ್ಮಿಂದ ಸಾಧ್ಯವಿಲ್ಲ ಎಂದರೆ ನನಗೆ ಅಧಿಕಾರ ಕೊಡಿ, ನಾನು ಗುಂಡು ಹೊಡೆಯುತ್ತೇನೆ ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.



Join Whatsapp