Home ಟಾಪ್ ಸುದ್ದಿಗಳು ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು ಗೆದ್ದಾಗಿದೆ, ಅಂತರ ತಿಳಿಯಲಷ್ಟೇ ಚುನಾವಣೆ : ಯಡಿಯೂರಪ್ಪ

ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು ಗೆದ್ದಾಗಿದೆ, ಅಂತರ ತಿಳಿಯಲಷ್ಟೇ ಚುನಾವಣೆ : ಯಡಿಯೂರಪ್ಪ

BS Yeddyurappa. (File Photo: IANS)

ಹುಬ್ಬಳ್ಳಿ : ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ ಪಕ್ಷ ಬಿಜೆಪಿ ಇದೀಗಾಗಲೇ ಗೆಲುವು ಕಂಡಿದೆ, ಈಗ ಬರೀ ಗೆಲುವಿನ ಅಂತರ ತಿಳಿದುಕೊಳ್ಳಲು ಚುನಾವಣೆ ನಡೆಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ವಿಧಾನ ಪರಿಷತ್‌ ಚುನಾವಣೆಯ ಪ್ರಚಾರಾರ್ಥ ಸ್ವರಾಜ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ 18ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಲಿದೆ, ಈ ಬಾರಿ ಪರಿಷತ್‌ ಚುನಾವಣೆಯಲ್ಲಿ ನಾವು ಬಹುಮತ ಪಡೆಯುವುದು ಪಕ್ಕಾ ಎಂದಿದ್ದಾರೆ.

ಚುನಾವಣೆ ಬಳಿಕ ರಾಜ್ಯಾದ್ಯಂತ ನಾನು ಪ್ರವಾಸ ಕೈಗೊಳ್ಳುತ್ತೇನೆ. ಪ್ರತಿ ಜಿಲ್ಲೆಗೆ ತೆರಳಿ ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಹುರಿದುಂಬಿಸಿ ಪಕ್ಷವನ್ನು ಮತ್ತಷ್ಟು ಬಲಿಷ್ಠ ಗೊಳಿಸುವ ಪ್ರಯತ್ನವನ್ನು ಮಾಡುತ್ತೇನೆ ಎಂದರು. ಅಲ್ಲದೇ ಜನಪರ ಯೋಜನೆಗಳೊಂದಿಗೆ ಬಿಜೆಪಿ ಜನರ ವಿಶ್ವಾಸ ಗಳಿಸಿದೆ ಎಂದರು.

ಹೊಟ್ಟೆ ಪಾಡಿಗೆ ದಲಿತರು ಬಿಜೆಪಿ ಸೇರುತ್ತಾರೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಎಸ್ ವೈ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಕಾಂಗ್ರೆಸ್‌ ಮಾಡಿದ ಅನ್ಯಾಯವೇ ಸಾಕಷ್ಟಿದೆ. ಕಾಂಗ್ರೆಸ್ಸಿಗರು ಅವರ ಅಂತ್ಯಸಂಸ್ಕಾರಕ್ಕೂ ಜಾಗ ನಿಡಿರಲಿಲ್ಲ, ಅಂಥವರು ಈಗ ಅಂಬೇಡ್ಕರ್ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ. ದೇಶದ ಮತ್ತು ದಲಿತರ ಸಮಗ್ರ ಅಭಿವೃದ್ಧಿಗಾಗಿ ದಲಿತರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

Join Whatsapp
Exit mobile version