Home ಟಾಪ್ ಸುದ್ದಿಗಳು ಇಂದಿನ ಸಿಎಂ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ಬಗ್ಗೆ ಚರ್ಚೆ: ಡಾ. ಸುಧಾಕರ್

ಇಂದಿನ ಸಿಎಂ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ಬಗ್ಗೆ ಚರ್ಚೆ: ಡಾ. ಸುಧಾಕರ್

ಬೆಂಗಳೂರು : ಕೊರೋನಾ ಮೂರನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಮಿತಿ ಸಭೆ ನಡೆಯಲಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಸುಧಾಕರ್, ಪಾಸಿಟಿವ್ ಕೇಸ್, ಆಸ್ಪತ್ರೆಗೆ ಸೇರುವವರು, ಮಕ್ಕಳ ಬಗ್ಗೆ ಹಾಗೂ ವೀಕೆಂಡ್ ಕರ್ಫ್ಯೂ ಬಗ್ಗೆಯೂ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು ನಮ್ಮ ಕೆಲಸ. ಹೆಚ್ಚು ಸಾವು-ನೋವು ಆಗಬಾರದು ಅನ್ನೋದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಇಂದು ಸಭೆ ನಡೆಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

Join Whatsapp
Exit mobile version