Home ಟಾಪ್ ಸುದ್ದಿಗಳು ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ: ಮುಖ್ಯಮಂತ್ರಿ ಸಭೆಯಲ್ಲಿ ತೀರ್ಮಾನ

ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ: ಮುಖ್ಯಮಂತ್ರಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ.ಇದೇ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕಫ್ಯೂ೯ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ರಾಜ್ಯದಲ್ಲಿ ಕಫ್ಯೂ೯ ಜಾರಿ ಇರಲಿದೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

ಗುರುವಾರದಿಂದಲೇ ಬೆಂಗಳೂರಿನಲ್ಲಿ 10 ಮತ್ತು 12 ನೇ ತರಗತಿ ಹೊರತುಪಡಿಸಿ 2 ವಾರಗಳ ಕಾಲ 1 ರಿಂದ 9 ನೇ ತರಗತಿಗಳಲ್ಲಿ ಆನ್ ಲೈನ್ ತರಗತಿಗೆ ಸೂಚನೆ ನೀಡಲಾಗಿದೆ. ಸಭೆ, ಸಮಾರಂಭಗಳಿಗೆ 2 ವಾರ ಕಡಿವಾಣ .
ಹೊರರಾಜ್ಯದಿಂದ ಕನಾ೯ಟಕಕ್ಕೆ ಬರುವ ಪ್ರಯಾಣಿಕರಿಗೆ ಆರ್ ಟಿಪಿಸಿ ಆರ್ ಕಡ್ಡಾಯ ಮಾಡಲಾಗಿದೆ. ಮಸೀದಿ,ಮಂದಿರ,ಚರ್ಚ್ ಗಳಲ್ಲಿ 50ಕ್ಕಿಂತ ಹೆಚ್ಚಿನ ಜನರು ಪ್ರಾರ್ಥನೆ ಸಲ್ಲಿಸುವುದನ್ನು ನಿರ್ಬಂಧಿಸಲಾಗಿದೆ.

Join Whatsapp
Exit mobile version