ದ.ಕ ದಲ್ಲಿ ನಾಳೆ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 7ರವರೆಗೆ ವೀಕೆಂಡ್ ಕರ್ಫ್ಯೂ : ಜಿಲ್ಲಾಧಿಕಾರಿ

Prasthutha|

ಮಂಗಳೂರು : ಕೊರೋನಾ ಸೊಂಕು ಪ್ರಕರಣ ದಕ್ಷಿಣ ಕನ್ನಡದಲ್ಲಿ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆ ಸೋಮವಾರದಿಂದ ಶುಕ್ರವಾರದ ವರೆಗೆ ಅನ್ ಲಾಕ್ ಆಗಲಿದ್ದು, ಸರ್ಕಾರದ ಆದೇಶದಂತೆ ನಾಳೆ (ಶುಕ್ರವಾರ) ಸಂಜೆ 7ರಿಂದ ಸೋಮವಾರ ಮುಂಜಾನೆ 7ರವರೆಗೆ ಸಂಪೂರ್ಣ ಬಂದ್ ಮಾಡಿ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ದಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

- Advertisement -

ಈ ಕುರಿತು ಹೇಳಿಕೆ ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ವೇಳೆ ಬಿಗಿ ಕ್ರಮ ಕೈಳ್ಳಲಾಗುವುದು. ಕೇವಲ ತುರ್ತು ಸೇವೆ, ಹಾಲಿನ ಔಟ್ ಲೆಟ್ ತೆರೆಯಲು ಅವಕಾಶ ನೀಡಲಾಗುವುದು. ಉಳಿದಂತೆ ಜಿಲ್ಲೆ ಸಂಪೂರ್ಣ ಬಂದ್ ಆಗಲಿದೆ. ಅನಗತ್ಯ ಸಂಚಾರ ಮತ್ತು ಕೊವಿಡ್ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.



Join Whatsapp