ವೀಕೆಂಡ್ ಕರ್ಫ್ಯೂಗೆ ಕರ್ನಾಟಕ ಸ್ತಬ್ಧ; ಅಗತ್ಯ ಸೇವೆ ಅಬಾಧಿತ

Prasthutha|

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದ್ದು, ನಿನ್ನೆ ರಾತ್ರಿ 9 ಗಂಟೆಯಿಂದ ರಾಜ್ಯಾದ್ಯಂತ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ.

- Advertisement -

ಬೆಂಗಳೂರಿನಲ್ಲೂ ವೀಕೆಂಡ್ ಕರ್ಪ್ಯೂ ಕಟ್ಟುನಿಟ್ಟಿನ ಜಾರಿಗೆ ಕ್ರಮಕೈಗೊಳ್ಳಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿರುವ ಪೊಲೀಸರು, ಅನಗತ್ಯವಾಗಿ ಹೊರಗೆ ಬರುವವರ ವಾಹನಗಳನ್ನು ಜಪ್ತಿ ಮಾಡಿ ಲಾಠಿ ಪ್ರಹಾರ ನಡೆಸಿ ನಿಯಂತ್ರಿಸುತ್ತಿದ್ದಾರೆ.

ಮಂಗಳೂರು, ಕಲಬುರಗಿ, ಹಾಸನ, ಮೈಸೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳು ಸಂಪೂರ್ಣ ಸ್ತಬ್ಧಗೊಂಡಿವೆ. ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಹಾಲು, ತರಕಾರಿ, ದಿನಸಿ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. 10 ಗಂಟೆಯ ನಂತರ ರಸ್ತೆಯಲ್ಲಿ ಕಂಡುಬಂದ ಸಾರ್ವಜನಿಕರ ಮೇಲೆ ಪೊಲೀಸರು ಲಾಠಿಪ್ರಹಾರ ನಡೆಸುತ್ತಿದ್ದ ದೃಶ್ಯ ಕೆಲವು ನಗರಗಳಲ್ಲಿ ಕಂಡುಬಂತು.

- Advertisement -

ಮಂಗಳೂರಿನಲ್ಲಿ ಪೊಲೀಸ್ ಆಯುಕ್ತ ಶಶಿಕುಮಾರ್ ರಸ್ತೆಗಿಳಿದು ಕರ್ಫ್ಯೂ ಅನುಷ್ಠಾನದ ಬಗ್ಗೆ ಪರಿಶೀಲಿಸಿದರು. ಅಗತ್ಯ ಸೇವೆ ಒದಗಿಸಲು ಕೆಲಸ ಮಾಡುವ ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಇದರ ಹೊರತಾಗಿ ಯಾವುದೇ ಜನರಿಗೆ ಅವಕಾಶ ಇಲ್ಲ. ಒಂದು ವೇಳೆ ಅನಗತ್ಯವಾಗಿ ಜನರು ಹೊರ ಬಂದರೆ ಅಂಥವರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.

Join Whatsapp