ಬೆಂಗಳೂರು: ಈ ವಾರಾಂತ್ಯ ಕೂಡ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವ ಕರ್ಫ್ಯೂ ಮುಂದುವರಿಯಲಿದೆ.
ದಕ್ಷಿಣ ಕನ್ನಡ ಸೇರಿದಂತೆ ರಾಜ್ಯಾದ್ಯಂತ ಶುಕ್ರವಾರ ರಾತ್ರಿ 10 ಗಂಟೆಯಿಂದ ವಾರಾಂತ್ಯ ಕರ್ಫ್ಯೂ ಆರಂಭಗೊಳ್ಳಲಿದ್ದು, ಸೋಮವಾರ ಬೆಳಗ್ಗೆ 5ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ದ. ಕ. ಜಿಲ್ಲೆಯಲ್ಲಿ ಈ ವಾರಾಂತ್ಯ ಕರ್ಫ್ಯೂ ಹಿನ್ನೆಲೆ ಮದುವೆಗೆ ಒಳಾಂಗಣದಲ್ಲಿ 100 ಹಾಗೂ ಹೋರಾಂಗಣದಲ್ಲಿ 200 ಮಂದಿಗೆ ಅವಕಾಶ ನೀಡಲಾಗಿದೆ. ಹರಕೆ ಯಕ್ಷಗಾನವನ್ನು 100 ಜನರಿಗೆ ಸೀಮಿತಗೊಳಿಸಿ ಕೌಟುಂಬಿಕ ಕಾರ್ಯಕ್ರಮವಾಗಿ ನಡೆಸಬಹುದು. ಇತರ ಯಾವುದೇ ಕಾರ್ಯಕ್ರಮಗಳಿಗೆ ರಿಯಾಯಿತಿ ಇಲ್ಲ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಶಾಲಾ ಕಾಲೇಜುಗಳು ಬಂದ್ ಆಗಲಿದ್ದು, ಪ್ರಯಾಣಿಕರ ಸ್ಪಂದನೆಗೆ ತಕ್ಕಂತೆ ಬಸ್ ಓಡಾಟ ಇರಲಿದೆ. ಅಗತ್ಯ ವಸ್ತುಗಳ ಅಂಗಡಿಗಳು ತೆರೆಯಲಿವೆ.