ದಕ್ಷಿಣ ಕನ್ನಡದಲ್ಲಿ ವೀಕೆಂಡ್ ಲಾಕ್‌ಡೌನ್ | ತಪಾಸಣೆ ಬಿಗಿಗೊಳಿಸಿದ ಪೊಲೀಸರು

Prasthutha|

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ತಾಲೂಕುಗಳಲ್ಲಿ ಬಿಗಿ ತಪಾಸಣೆ ನಡೆಸಲಾಗುತ್ತಿದ್ದು, ಮಂಗಳೂರು ನಗರದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ನಗರ ಪೊಲೀಸ್ ಕಮಿಷನರ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಆದೇಶದಂತೆ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ, ಮೂಡಬಿದ್ರೆ, ಕಡಬದಲ್ಲೂ ಪೊಲೀಸರು ತಪಾಸಣೆ ಬಿಗಿಗೊಳಿಸಿದ್ದು, ಅನಾವಶ್ಯಕವಾಗಿ ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ.

- Advertisement -

ಸರಿಯಾದ ದಾಖಲೆ ಇಲ್ಲದ ವಾಹನಗಳನ್ನು ಪೊಲೀಸರು ವಾಪಾಸ್ ಕಳುಹಿಸುತ್ತಿದ್ದಾರೆ.

- Advertisement -