ಯಾರೋ ಒಬ್ಬರ ಲಾಭಕ್ಕಾಗಿ ವೀಕೆಂಡ್, ನೈಟ್ ಕರ್ಪ್ಯೂ ನಿಯಮ ಬದಲಾಯಿಸಕ್ಕಾಗಲ್ಲ: ಆರ್ ಅಶೋಕ್

Prasthutha|

ಬೆಂಗಳೂರು : ಜನರ ಆರೋಗ್ಯದ ಹಿತದೃಷ್ಠಿಯಿಂದ ಕರ್ನಾಟಕದಲ್ಲಿ ವೀಕೆಂಡ್, ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅದರ ಹೊರತಾಗಿ ಯಾರೋ ಒಬ್ಬರ ಲಾಭಕ್ಕಾಗಿ ನಿಯಮ ಬದಲಾಯಿಸೋದಕ್ಕೆ ಆಗುವುದಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಜನವರಿ 31ರ ಬಳಿಕ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಮುಂದುವರೆಸೋದಾ ಅಥವಾ ಬೇಡವಾ ಎನ್ನುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ ಎಂದರು.

ಇನ್ನು ನಮಗೆ ಜನರ ಆರೋಗ್ಯ, ಪ್ರಾಣದ ರಕ್ಷಣೆ ಮುಖ್ಯವಾಗಿದೆ. ಈ ಕಾರಣದಿಂದಲೇ ವೀಕೆಂಡ್ ಹಾಗೂ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಇದು ನಮ್ಮ ಕರ್ತವ್ಯ ಕೂಡ ಆಗಿದ್ದು ಅದರ ಹೊರತಾಗಿ ಯಾರೋ ಒಬ್ಬರ ಲಾಭಕ್ಕಾಗಿ ನಿಯಮವನ್ನು ಬದಲಾಯಿಸೋದಕ್ಕೆ ಆಗೋದಿಲ್ಲ ಎಂದು ಹೇಳಿದ್ದಾರೆ.

Join Whatsapp