ಶೆಟ್ಟರ್ ಕಾಂಗ್ರೆಸ್’ಗೆ ಬಂದರೆ ಸ್ವಾಗತ: ಸಿದ್ದರಾಮಯ್ಯ

Prasthutha|

ಕಾರವಾರ : ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ಮಾತನಾಡಿಲ್ಲ. ನಮ್ಮ ಪಕ್ಷಕ್ಕೆ ಬಂದರೆ ನಾವು ಸ್ವಾಗತಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ಮಾತನಾಡಿಲ್ಲ. ಪಕ್ಷಕ್ಕೆ ಬಂದರೆ ನಾವು ಸ್ವಾಗತ ಮಾಡುತ್ತೇವೆ. ಇನ್ನೂ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಬರುತ್ತಾರೆ. ನನ್ನನ್ನ ಕಟ್ಟಿ ಹಾಕಲು ಬಿಜೆಪಿ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ.

ಇಂದೂ ಟಾರ್ಗೆಟ್ ಮಾಡಿದ್ದಾರೆ, ನಾಳೆಯೂ ಟಾರ್ಗೆಟ್ ಮಾಡ್ತಾರೆ. ನನ್ನ ಕಂಡರೆ ಬಿಜೆಪಿಯವರಿಗೆ ಭಯ ಎಂದು ಎಂದು ಸಿದ್ದರಾಮಯ್ಯ ಹೇಳಿದರು.

- Advertisement -


ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಬಂಡಾಯವೆದ್ದಿದ್ದಾರೆ. ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

Join Whatsapp