ದಾವಣಗೆರೆ: ಯುದ್ಧ ಪೀಡಿತ ಉಕ್ರೇನ್ ನಿಂದ ಸುರಕ್ಷಿತವಾಗಿ ಆಗಮಿಸಿದ ವಿದ್ಯಾರ್ಥಿಗೆ ಬಿಜೆಪಿ ಧ್ವಜ ಹಿಡಿದು ಸ್ವಾಗತಿಸಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ.
ಉಕ್ರೇನ್ ನಲ್ಲಿ ಎಂಬಿಬಿಎಸ್ ಓದುತ್ತಿದ್ದ ಸೊಕ್ಕೆ ಗ್ರಾಮದ ಯುವಕ ಆದರ್ಶ್ ಸುರಕ್ಷಿತವಾಗಿ ಗುರುವಾರ ಗ್ರಾಮಕ್ಕೆ ತಲುಪಿದ್ದು, ಈ ವೇಳೆ ಸೊಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿಯವರು ಬಿಜಿಪಿ ಬಾವುಟ ಹಿಡಿದು ಸ್ವಾಗತಿಸಿದ್ದಾರೆ.
ಬಿಜೆಪಿ ಮುಖಂಡರ ಈ ವರ್ತನೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.