Home ಟಾಪ್ ಸುದ್ದಿಗಳು ನೀತಿ ಸಂಹಿತೆ ಜಾರಿ ಇದ್ದರೂ ಡಿಸಿಎಂರಿಂದ ಅನುದಾನ ಭರವಸೆ : ಚುನಾವಣಾ ಆಯೋಗಕ್ಕೆ ವೆಲ್ಫೇರ್ ಪಾರ್ಟಿ...

ನೀತಿ ಸಂಹಿತೆ ಜಾರಿ ಇದ್ದರೂ ಡಿಸಿಎಂರಿಂದ ಅನುದಾನ ಭರವಸೆ : ಚುನಾವಣಾ ಆಯೋಗಕ್ಕೆ ವೆಲ್ಫೇರ್ ಪಾರ್ಟಿ ದೂರು

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗಳ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥನಾರಾಯಣ ಅವರು ಪ್ರತಿ ಗ್ರಾಮ ಪಂಚಾಯಿತಿಗೆ 1.50 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಘೋಷಣೆ ಮಾಡಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು ಚುನಾವಣಾ ಆಯೋಗ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ.

“ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಚುನಾವಣಾ ಲಾಭಕ್ಕಾಗಿ ಬಿಜೆಪಿ ಪಕ್ಷ ಕುತಂತ್ರಗಳನ್ನು ಮಾಡುತ್ತಲೆ ಇರುತ್ತದೆ. ಈ ನಿಟ್ಟಿನಲ್ಲಿ ಉಪಮುಖ್ಯಮಂತ್ರಿಗಳು ನೀಡಿರುವ ಭರವಸೆ ಘೋಷಣೆಯ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ದೂರನ್ನು ಸಲ್ಲಿಸುತ್ತಿದೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ಚುನಾವಣಾ ಆಯೋಗ ತುರ್ತಾಗಿ ಕ್ರಮಕ್ಕೆ ಮುಂದಾಗಬೇಕು” ಎಂದು ಪಕ್ಷದ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೀರ್ ಹುಸೇನ್ ದೂರಿನಲ್ಲಿ ತಿಳಿಸಿದ್ದಾರೆ.

Join Whatsapp
Exit mobile version